ಪ್ರಧಾನಿ ಮೋದಿ ವಚನ ಭ್ರಷ್ಟರಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Date:

  • ‘ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಮೋದಿ ಸುಳ್ಳು ಹೇಳುತ್ತಿದ್ದಾರೆ’
  • ‘ಮೋದಿ ಬೇಹುಗಾರಿಕೆ ನಡೆಸಿ ಪರೀಕ್ಷೆ ಮಾಡಿಕೊಳ್ಳಲಿ’

ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಎಲ್ಲ ಏಜನ್ಸಿಗಳು ಇವೆ. ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನಿಜಕ್ಕೂ ತಲುಪುತ್ತಿವೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಂಡು ಮಾತನಾಡಲಿ. ಸುಮ್ಮನೇ ಸುಳ್ಳು ಹೇಳಬೇಡಿ ಎಂದು ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭಾ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ವಿರುದ್ಧ ಗುಡುಗಿದರು.

- Advertisement -

ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, “ಕರ್ನಾಟಕ ಸರ್ಕಾರದ ಬಗ್ಗೆ ಏನೇನೋ ಸುಳ್ಳು ಹೇಳುತ್ತಾ ಮೋದಿ ತಿರುಗಾಡುತ್ತಿದ್ದಾರೆ. ಮೊನ್ನೆ ಪೂನಾದಲ್ಲೂ ಸುಳ್ಳು ಹೇಳಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ಅಭಿವೃದ್ಧಿಯಾಗುತ್ತಿಲ್ಲ ಎಂದಿದ್ದಾರೆ. ಮೋದಿ ಅವರು ಗುಪ್ತಚರ ಇಲಾಖೆಯಿಂದ ಬೇಹುಗಾರಿಕೆ ನಡೆಸಿ ಪರೀಕ್ಷೆ ಮಾಡಿಕೊಳ್ಳಲಿ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಬೇರೆ ಪಕ್ಷಗಳ ತರ ಸುಮ್ಮನೇ ಬೋಗಸ್‌ ಭರವಸೆಗಳನ್ನು ನಾವು ಘೋಷಿಸಿಲ್ಲ. ನುಡಿದಂತೆ ನಡೆಯುವ ಸರ್ಕಾರ ನಮ್ಮದು. ಮೋದಿ ಕೂಡ ನುಡಿದಿದ್ದರು; ಒಂದು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದರು. ಎಲ್ಲಿದೆ ಉದ್ಯೋಗ? ನಾನು ಅಧಿಕಾರಕ್ಕೆ ಬಂದರೆ 15 ಲಕ್ಷ ರೂ. ಪ್ರತಿ ಕುಟುಂಬಕ್ಕೆ ಕೊಡುತ್ತೇವೆ ಎಂದಿದ್ದರು. ಒಬ್ಬರಿಗಾದ್ರೂ ಸಿಕ್ತಾ? ಒಬ್ಬ ದೇಶದ ಪ್ರಧಾನಿ ವಚನ ಕೊಟ್ಟ ಮೇಲೆ ವಚನ ಭ್ರಷ್ಟರಾಗಲು ಸಾಧ್ಯವೇ? ಮೋದಿ ಇದನ್ನು ನಿಜ ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೋಕ್ಸೊ ಕಾಯ್ದೆ ಬಂದರೂ ತಗ್ಗದ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ

“ನಾಳೆ ಪಾರ್ಲಿಮೆಂಟ್‌ಗೆ ತೊಂದರೆ ಆಗುತ್ತದೆ ಎಂದು ರಾಜ್ಯದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ. 1.40 ಲಕ್ಷ ಕುಟುಂಬಗಳಿಗೆ ಗೃಹಜ್ಯೋತಿ ಅನುಕೂಲವಾಗುತ್ತಿದೆ. ಕಾಂಗ್ರೆಸ್‌ ಸರ್ಕಾರ ಯಾವಾಗ ಅಧಿಕಾರಕ್ಕೆ ಬರುತ್ತದೆಯೋ ಅವಾಗ ಹೊಸ ಹೊಸ ಕಾರ್ಯಕ್ರಮ ಕೊಡುತ್ತ ಬಂದಿದೆ. ಬಡವರಿಗಾಗಿ, ಹೆಣ್ಣು ಮಕ್ಕಳಿಗಾಗಿ, ಯುವಕರಿಗಾಗಿ, ಹಾಗೂ ಕೂಲಿಕಾರ್ಮಿಕರಿಗೆ ಹೊಸ ಯೋಜನೆ ತರು‌ತ್ತದೆ. ಇದಕ್ಕೆ ಸಾಕ್ಷಿ ಈ ಐದು ಗ್ಯಾರಂಟಿಗಳು. ದೇಶ ಸುರಕ್ಷಿತವಾಗಿ‌ ಉಳಿಯಬೇಕಾದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು” ಎಂದು ಪ್ರತಿಪಾದಿಸಿದರು.

ಹೈದ್ರಾಬಾದ್‌ ಕರ್ನಾಟಕಕ್ಕೆ ಸಿಎಂ ಗಮನ ಹರಿಸಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈದ್ರಾಬಾದ್‌ ಕರ್ನಾಟಕ ಬಗ್ಗೆ ಕಾಳಜಿವಹಿಸಬೇಕು. ಇಲ್ಲಿ ಗುಣಮಟ್ಟದ ರಸ್ತೆಗಳು ನಿರ್ಮಾಣವಾಗಬೇಕು. ಶಿಕ್ಷಣದಲ್ಲಿ ಮುಂದೆ ಬರಬೇಕು. ನಾನು ಈ ಬಗ್ಗೆ ಪದೇ ಪದೇ ಹೇಳಿ ಜನರ ನಿರೀಕ್ಷೆಗಳನ್ನು ಹುಸಿಮಾಡುವುದಿಲ್ಲ. ಈ ಭಾರಿಯಾದ್ರೂ ಸಿದ್ದರಾಮಯ್ಯ ಅವರು ವಿಶೇಷ ಗಮನ ಹರಿಸಿ ಅಭಿವೃದ್ಧಿಪಡಿಸಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...