ಹಾಸಿಗೆ, ದಿಂಬು ನೀಡುವಂತೆ ಕೋರಿ ನಟ ದರ್ಶನ್ ಅರ್ಜಿ: ಕೋರ್ಟ್‌ ಆದೇಶ ಹೇಳುವುದೇನು?

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ತಮಗೆ ಹಾಸಿಗೆ, ದಿಂಬು ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಎಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಎಚ್‌ ಸಂಪೂರ್ಣವಾಗಿ ಪುರಸ್ಕರಿಸಿಲ್ಲ. ಹಾಸಿಗೆ-ದಿಂಬು ನೀಡಲು ಕೋರ್ಟ್ ನಿರಾಕರಿಸಿದೆ.

- Advertisement -

ಈ ಹಿಂದೆ ಕೋರ್ಟ್ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಅವರು ಸಿಗರೇಟ್ ಸೇದುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು. ಅದಾದ ಬಳಿಕ ನಟ ಎಂಬ ಕಾರಣಕ್ಕೆ ಯಾವುದೇ ವಿಶೇಷ ಸೌಲಭ್ಯ ನೀಡದಂತೆ ಆದೇಶಿಸಿತ್ತು. ಆದರೆ ನಟ ದರ್ಶನ್‌ಗೆ ದಿಂಬು, ಕನ್ನಡ, ಬಾಚಣಿಗೆ, ಬೆಡ್‌ಶೀಟ್ ಮೊದಲಾದವು ಸಿಕ್ಕಿರಲಿಲ್ಲ. ಈ ಹಿನ್ನೆಲೆ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ನಟ ದರ್ಶನ್‌ ಸೇರಿ 7 ಮಂದಿಗೆ ಜಾಮೀನು

ಕೋರ್ಟ್‌ ಹಾಸಿಗೆ, ಬಟ್ಟೆಗಳನ್ನು ಒದಗಿಸುವಂತೆ ಆದೇಶಿಸಿದೆ. ಆದರೆ ಬೆಡ್‌, ದಿಂಬು, ಬಾಚಣಿಗೆ ಮೊದಲಾದವುಗಳನ್ನು ನೀಡಲು ಕೋರ್ಟ್ ಅನುಮತಿಸಿಲ್ಲ. ಇದೇ ಆದೇಶ ಆರೋಪಿ ಪವಿತ್ರಾಗೂ ಅನ್ವಯವಾಗಲಿದೆ.

ತಮ್ಮನ್ನು ಬೇರೆ ಬ್ಯಾಕರ್‌ಗೆ ಸಹ ಸ್ಥಳಾಂತರಿಸುವಂತೆಯೂ ಸಹ ದರ್ಶನ್ ಮನವಿ ಮಾಡಿದ್ದರು. ಈ ಅಧಿಕಾರವನ್ನು ಜೈಲಾಧಿಕಾರಿಗಳಿಗೆ ನೀಡಿರುವ ಕೋರ್ಟ್‌, ನಿರ್ಣಯ ಜೈಲಾಧಿಕಾರಿಗಳಿಗೆ ಬಿಟ್ಟದ್ದು ಎಂದು ಹೇಳಿದೆ.

ಈ ಹಿಂದೆ ದರ್ಶನ್ ತಾವಿರುವ ಬ್ಯಾಕರ್‌ಗೆ ಬೆಳಕು ಸರಿಯಾಗಿ ಬರುತ್ತಿಲ್ಲ. ಇದರಿಂದಾಗಿ ಫಂಗಸ್ ಆಗಿದೆ ಎಂದು ಹೇಳಿದ್ದರು. ಆದರೆ ಜೈಲಿನ ಅಧಿಕಾರಿಗಳು ಭದ್ರತೆ ದೃಷ್ಟಿಯಿಂದ ಅವರನ್ನು ಬೇರೆ ಬ್ಯಾಕರ್‌ಗೆ ಸ್ಥಳಾಂತರಿಸಿಲ್ಲ ಎಂದಿದ್ದರು.

ಇನ್ನು ತಮ್ಮನ್ನು ಆರೋಪದಿಂದ ಕೈಬಿಡುವಂತೆ ಐದನೇ ಆರೋಪಿ ನಂದೀಶ್ ಅರ್ಜಿ ಹಾಕಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...