ಅಪಘಾತ ಪರಿಹಾರ ನೀಡದಿದ್ದಕ್ಕೆ KSRTC ಬಸ್‌ಅನ್ನು ವಶಕ್ಕೆ ಪಡೆದ ನ್ಯಾಯಾಲಯ

Date:

ಅಪಘಾತ ಎಸಗಿ, ಪರಿಹಾರ ಕೊಡದೆ ನಿರ್ಲಕ್ಷ್ಯ ಧೋರಣೆ ತೋರಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಅನ್ನು ನ್ಯಾಯಾಲಯವು ವಶಕ್ಕೆ ಪಡೆದಿರುವ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ.

- Advertisement -

ಚಿಕ್ಕಮಗಳೂರು ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ಅನ್ನು ನ್ಯಾಯಾಲಯದ ಆದೇಶದ ಮೇರೆಗೆ ವಕೀಲರ ತಂಡವು ಚನ್ನರಾಯಪಟ್ಟಣದಲ್ಲಿ ವಶಕ್ಕೆ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

2023ರಲ್ಲಿ ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಒಂದು ಅಪಘಾತಕ್ಕೆ ತುತ್ತಾಗಿತ್ತು. ಇದರಲ್ಲಿ ಹಾಸನ ಮೂಲದ ರೇಣುಕಪ್ಪ ಮತ್ತು ರವಿ ಕಿರಣ್ ಎಂಬವರು ಮೃತಪಟ್ಟಿದ್ದರು. ಆದರೆ, ಅವರ ಕುಟುಂಬಕ್ಕೆ ಕೆಎಸ್‌ಆರ್‌ಟಿಸಿ ಪರಿಹಾರ ನೀಡಿರಲಿಲ್ಲ. ಮೃತರ ಕುಟುಂಬಗಳು ಪರಿಹಾರಕ್ಕಾಗಿ ಚನ್ನರಾಯಪಟ್ಟಣ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರು ಮೃತರ ಕುಟುಂಬಗಳಿಗೆ ಒಟ್ಟು 32.5 ಲಕ್ಷ ರೂ. ಪರಿಹಾರ ನೀಡಬೇಕೆಂದು ಕೆಎಸ್‌ಆರ್‌ಟಿಸಿಗೆ ಆದೇಶಿಸಿತ್ತು.

ಆದರೆ, ಕೆಎಸ್‌ಆರ್‌ಟಿಸಿ ಪರಿಹಾರ ಪಾವತಿ ಮಾಡಿರಲಿಲ್ಲ. ಹೀಗಾಗಿ, ಮೃತರ ಕುಟುಂಬಗಳು ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದವರು. ಮೃತರ ಕುಟಂಬಗಳಲ್ಲಿ ಒಬ್ಬರಾದ ನಾಗರತ್ಮಮ್ಮ ಎಂಬವರು 2025ರ ಡಿಸೆಂಬರ್‌ನಲ್ಲಿ ಕೆಎಸ್‌ಆರ್‌ಟಿಸಿ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಚನ್ನರಾಯಪಟ್ಟಣ ನ್ಯಾಯಾಲಯವು, ಅಪಘಾತಕ್ಕೀಡಾಗಿದ್ದ ಬಸ್‌ಅನ್ನು ಜಪ್ತಿ ಮಾಡಲು ಆದೇಶಿಸಿತ್ತು.

ನ್ಯಾಯಾಲಯದ ಆದೇಶದಂತೆ ಮೂವರು ವಕೀಲರ ತಂಡವು, ಶೃಂಗೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಅನ್ನು ಚನ್ನರಾಯಪಟ್ಟಣ ಬಳಿ ತಡೆದು, ಪ್ರಯಾಳಿಕರನ್ನು ಕೆಳಗಿಳಿಸಿ, ಬಸ್‌ಅನ್ನು ಜಪ್ತಿ ಮಾಡಿದ್ದಾರೆ.

ಆದರೆ, ನಡುರಸ್ತೆಯಲ್ಲೇ ತಮ್ಮನ್ನು ಇಳಿಸಿದ್ದಕ್ಕಾಗಿ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ, ಇದೇ ರೀತಿ ಪರಿಹಾರ ವಿಳಂಬದ ಕಾರಣಕ್ಕಾಗಿ ಶಿವಮೊಗ್ಗದ ಸಾಗರದಲ್ಲಿಯೂ ಕೆಎಸ್‌ಆರ್‌ಟಿಸಿ ಬಸ್‌ಅನ್ನು ಜಪ್ತಿ ಮಾಡಲಾಗಿತ್ತು.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...