ಸಚಿವ ವೆಂಕಟೇಶ್ ಹೇಳಿಕೆಯಿಂದ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ‌ ತಲೆ ಎತ್ತಲಿದೆ: ಮಾಜಿ ಸಿಎಂ ಬೊಮ್ಮಾಯಿ

Date:

  • ಗೋವುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಬೊಮ್ಮಾಯಿ ಆಕ್ಷೇಪ
  • ‘ತಮಗೆ ನೀಡಿರುವ ಖಾತೆ ಬದಲಾಯಿಸಲಿ ಎಂದೋ, ಹೈಕಮಾಂಡ್ ಮೆಚ್ಚಿಸಲೋʼ

ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈಕಮಾಂಡ್ ಮೆಚ್ಚಿಸಲೊ” ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

“ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಅವರು ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನಾಗಿ ತರಲಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ ಮಾಡುವ ಕಾನೂನುಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನುಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಸಿಎಂ ಸಚಿವರಿಗೆ ಸೂಕ್ತ ಸಲಹೆ ನೀಡುವ ಅವಶ್ಯಕತೆ ಇದೆ” ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಭ್ರಷ್ಟಾಚಾರ ಲೀಗಲೈಜ್ ಮಾಡಿದ್ದೇ ಬಿಜೆಪಿ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿ

ಭ್ರಷ್ಟಾಚಾರವನ್ನು ಲೀಗಲೈಜ್ ಮಾಡಿದ್ದು, ಬಿಜೆಪಿಯವರು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...

ತುಮಕೂರು | ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ...

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...