ಗೋ ಸಾಗಾಟ | ವಾಹನ ತಡೆದ ಬಳಿಕ ಸ್ಟನ್ ಗನ್ ಬಳಸಿ ದೌರ್ಜನ್ಯ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ

Date:

Advertisements
  • ‘ರಾಷ್ಟ್ರ ರಕ್ಷಣಾ ಪಡೆ’ಯ ಹೆಸರಲ್ಲಿ ದಾಳಿ ನಡೆಸುತ್ತಿದ್ದ ತಂಡ
  • ಆನ್‌ಲೈನ್ ಪೇಮೆಂಟ್ ಮೂಲಕ ಹಣ ಸಂಗ್ರಹ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿ

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಇದ್ರೀಸ್ ಪಾಷಾ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ, ಗೋ ಸಾಗಾಟದ ವಾಹನಗಳನ್ನು ತಡೆದ ನಂತರ ಅದರಲ್ಲಿದ್ದವರಿಗೆ ಸ್ಟನ್ ಗನ್ ಬಳಸಿ ಅಮಾನವೀಯವಾಗಿ ದೌರ್ಜನ್ಯ ನಡೆಸುತ್ತಿದ್ದ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

‘ರಾಷ್ಟ್ರ ರಕ್ಷಣಾ ಪಡೆ’ಯ ಹೆಸರನ್ನಿಟ್ಟುಕೊಂಡು ಪುನೀತ್ ಕೆರೆಹಳ್ಳಿ ನೇತೃತ್ವದ ದುಷ್ಕರ್ಮಿಗಳ ಗುಂಪು, ಕನಕಪುರ ತಾಲೂಕಿನ ಸಾತನೂರು ಬಳಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ತಡೆದು ದಾಳಿ ನಡೆಸಿದ್ದರು. ಆ ಬಳಿಕ ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದರು. ಈ ಘಟನೆಗೆ ಸಂಬಂಧಿಸಿ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.

ಇದಾದ ಬಳಿಕ ಅಮಾನುಷ ದೌರ್ಜನ್ಯ ನಡೆಸಿರುವ ಆರೋಪಿ ಪುನೀತ್ ಕೆರೆಹಳ್ಳಿ, ದೇಶದಲ್ಲಿ ನಿಷೇಧಕ್ಕೊಳಪಟ್ಟಿರುವ ಸ್ಟನ್ ಗನ್(ಕರೆಂಟ್ ಶಾಕ್ ಅನುಭವ ಕೊಡುವ ಗನ್) ಅನ್ನು ಬಳಸಿ, ‘ಇಂಥವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇವರಿಗೆ ಥರ್ಡ್ ಡಿಗ್ರಿ ಟ್ರೀಟ್‌ಮೆಂಟ್ ಕೊಡಬೇಕು’ ಎಂದು ಹೇಳುತ್ತಾ ಸ್ಟನ್ ಗನ್ ಬಳಸುತ್ತಿರುವ ದೃಶ್ಯ ವೀಡಿಯೋದಲ್ಲಿ ದಾಖಲಾಗಿದೆ.

Advertisements

ಈ ವಿಡಿಯೋವನ್ನು ಸ್ವತಃ ಪುನೀತ್ ಕೆರೆಹಳ್ಳಿ ತಂಡವೇ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಇದು ಯಾವಾಗಿನ ವಿಡಿಯೋ ಎಂದು ಇನ್ನೂ ತಿಳಿದುಬಂದಿಲ್ಲ. ಇದು ಈಗ ವೈರಲ್ ಆಗುತ್ತಿದ್ದು, ಇಂತಹ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳದಿರುವುದೇ ಇವರು ಕೊಲೆ ಮಾಡುವ ಮಟ್ಟಕ್ಕೆ ಬೆಳೆಯಲು ಕಾರಣ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಆನ್‌ಲೈನ್ ಪೇಮೆಂಟ್ ಮೂಲಕ ಹಣ ಸಂಗ್ರಹ
‘ರಾಷ್ಟ್ರ ರಕ್ಷಣಾ ಪಡೆ’ಯ ಹೆಸರನ್ನಿಟ್ಟುಕೊಂಡಿದ್ದ ಪುನೀತ್ ಕೆರೆಹಳ್ಳಿ ನೇತೃತ್ವದ ಗುಂಪು, ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಸಂಗ್ರಹ ಮಾಡುತ್ತಿದ್ದರು ಎಂಬ ಅಂಶಗಳು ತಿಳಿದುಬಂದಿದೆ.

https://www.facebook.com/100077742295476/videos/892176041841361

ಯಾರು ಈ ಪುನೀತ್ ಕೆರೆಹಳ್ಳಿ?
ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ಪುನೀತ್ ಕೆರೆಹಳ್ಳಿ ಸೂಲಿಬೆಲೆಯ ಶಿಷ್ಯ. ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ನನ್ನ ಗುರುಗಳು ಅಂತ ಆತನೇ ಹಲವೆಡೆ ಹೇಳಿಕೊಂಡಿರುವುದು ಕಂಡುಬಂದಿದೆ. ಅದಕ್ಕೆ ಪೂರಕ ಎಂಬಂತೆ, ಕೆಲ ತಿಂಗಳ ಹಿಂದೆ ಈತನ ‘ಅಧ್ವ’ ಯೂಟ್ಯೂಬ್‌ ಚಾನೆಲಿನ ಲಾಂಛನವನ್ನು ಕೂಡ ಬಿಡುಗಡೆ ಮಾಡಿದ್ದರು.

ಹಲಾಲ್-ಜಟ್ಕಾ ವಿವಾದದ ಸಂದರ್ಭದಲ್ಲಿ ಮುಸ್ಲಿಮರ ವಿರುದ್ಧ ಕರಪತ್ರ ಹಂಚಿ ಕೂಡ ಸುದ್ದಿಯಾಗಿದ್ದ ಈತ, ಹೆದ್ದಾರಿಗಳಲ್ಲಿ ಬಡಿಗೆ, ಬ್ಯಾಟು ಹಿಡಿದು ದಾಳಿ ನಡೆಸುತ್ತಿದ್ದ. ಪರವಾನಿಗೆ ಇದ್ದೂ ಕೂಡ ಗೋ ಸಾಗಣೆ ಮಾಡುವವವರ ಮೇಲೆ ದಾಳಿ ಮಾಡಿ ಅದರ ವಿಡಿಯೋವನ್ನು ಫೇಸ್‌ಬುಕ್‌ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡುತ್ತಿದ್ದ. ಅಲ್ಲದೇ, ಇದನ್ನೇ ಬಳಸಿಕೊಂಡು ಹಣ ಕೂಡ ಗಳಿಸುತ್ತಿದ್ದ ಎಂಬ ಆರೋಪ ಕೂಡ ಕೇಳಿಬಂದಿದೆ. ಬಿಜೆಪಿ ನಾಯಕರೊಂದಿಗೆ ಹತ್ತಿರದ ಸಂಬಂಧ ಹೊಂದಿದ್ದ ಎಂಬುದಕ್ಕೆ ಪುರಾವೆ ಒದಗಿಸುವ ಫೋಟೋಗಳು ಈಗ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X