ಅಕ್ಕಿ ನೀಡಲು ಕೇಂದ್ರ ಸರ್ಕಾರದ ನಿರಾಕರಣೆ ಖಂಡಿಸಿ ಸಿಪಿಐಎಂ ಪ್ರತಿಭಟನೆ

Date:

ಕಾಂಗ್ರೆಸ್‌ ಸರ್ಕಾರ ಘೋಷಿಸಿರುವ ಅನ್ನಭಾಗ್ಯ ಯೋಜನೆಗೆ ಅಕ್ಕಿ ಒದಗಿಸಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿರುವುದನ್ನು ಖಂಡಿಸಿ ಸಿಪಿಐಎಂ ಕಾರ್ಯಕರ್ತರು ಗದಗ ಜಿಲ್ಲೆಯ ಗಜೇಂದ್ರಘಡದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಗಜೇಂದ್ರಘಡ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಸಲ್ಲಿಸಿದ ಪ್ರತಿಭಟನಾಕಾರರು, “ರಾಜ್ಯಸರ್ಕಾರ ಜುಲೈ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ನಿರ್ಧರಿಸಿದೆ. ಅದು ಸ್ವಾಗತಾರ್ಹ. ಆದರೆ, ಕೇಂದ್ರ ಸರಕಾರವು ರಾಜ್ಯಕ್ಕೆ ಹೆಚ್ಚುವರಿ ಆಹಾರಧಾನ್ಯ ನೀಡುವಲ್ಲಿ ಸಂಕುಚಿತ ರಾಜಕೀಯ ಮಾಡುತ್ತಿರುವುದು ಖಂಡನೀಯ” ಎಂದು ಕಿಡಿಕಾರಿದ್ದಾರೆ.

“ರಾಜ್ಯ ಸರ್ಕಾರದ ಮನವಿಗೆ ಭಾರತ ಆಹಾರ ನಿಗಮದ ಅಧಿಕಾರಿಗಳು ಒಪ್ಪಿ, ಆಹಾರ ಧಾನ್ಯ ಒದಗಿಸುವುದಾಗಿ ಹೇಳಿದ್ದರೂ ಕೂಡಾ, ಕೇಂದ್ರ ಸರ್ಕಾರ ಬಡವರ ವಿರೋಧಿಯಾಗಿರುವುದು ಅಕ್ಷಮ್ಯ. ಕೇಂದ್ರವು ತನ್ನ ರಾಜಕೀಯವನ್ನು ಬದಿಗಿಟ್ಟು, ಒಪ್ಪಂದದಂತೆ ಭಾರತ ಆಹಾರ ನಿಗಮದ ಮೂಲಕ ಆಹಾರ ಧಾನ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜನರಿಗೆ ಆಹಾರಧಾನ್ಯದ ಬದಲು ನಗದು ವರ್ಗಾವಣೆ ಮಾಡುವಂತೆ ಸೂಚಿಸುವ ಬಿಜೆಪಿ ಧೋರಣೆಯು ಬಡವರ ಪರವಾಗಿರದೇ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಪರವಾಗಿದೆ” ಎಂದು ಕಿಡಿಕಾರಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಎಮ್ ಎಸ್ ಹಡಪದ, ಬಾಲು ರಾಠೋಡ, ಪೀರು ರಾಠೋಡ, ಮೈಬು ಹವಾಲ್ದಾರ ಮುಂತಾದವರು ಭಾಗವಹಿಸಿದ್ದರು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...