ಚಿಕ್ಕಮಗಳೂರು | ಚಾರ್ಮಾಡಿ ಘಾಟಿಯಲ್ಲಿ ಬಿರುಕುಬಿಟ್ಟ ತಡೆ ಗೋಡೆ; ಕುಸಿಯುವ ಆತಂಕ

Date:

  • ಏಕಮುಖ ಕಿರಿದಾದ ರಸ್ತೆಯಲ್ಲಿ ತಡೆಗೋಡೆಗೆ ವಾಹನ ಡಿಕ್ಕಿ
  • ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಸ್ಪಂದಿಸುವಂತೆ ಆಗ್ರಹ

ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಅಣ್ಣಪ್ಪ ದೇವಸ್ಥಾನದ ಬಳಿ ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ.

- Advertisement -

ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು, ಈ ರಸ್ತೆಯಲ್ಲಿ ಒಂದೇ ವಾಹನ ಸಾಗಲು ಸಾಧ್ಯವಾಗುತ್ತದೆ. ಹೀಗಾಗಿ, ಯಾವುದೋ ವಾಹನ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಡೆಗೋಡೆ ತಳದಿಂದಲೇ ಬಿರುಕು ಬಿಟ್ಟಿದ್ದು, ತಡೆಗೋಡೆ ಕುಸಿಯುವ ಸಂಭವ ಹೆಚ್ಚಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ರಸ್ತೆಯ ಬಲ ಭಾಗದಲ್ಲಿ ಬೃಹತ್ ಬಂಡೆ ಇರುವುದರಿಂದ ಈ ಸ್ಥಳದಲ್ಲಿ ರಸ್ತೆ ಮಾಡಲು ಆಗದೇ ಸುಮಾರು ವರ್ಷಗಳಿಂದ ಎರಡು ಕಡೆ ರಸ್ತೆ ಉಬ್ಬುಗಳನ್ನು ನಿರ್ಮಿಸಿ ಸಂಚರಿಸಲು ಕಿರುದಾರಿಯನ್ನೇ ಬಿಡಲಾಗಿದೆ. ಆದರೆ ಚಾರ್ಮಾಡಿ ಘಾಟ್‌ನ ಈ ತಡೆಗೋಡೆ ಕುಸಿದರೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ನಡುವಿನ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಳ್ಳುವ ಆತಂಕವಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಳೆ ಅಬ್ಬರಕ್ಕೆ ಕಕ್ಕಾಬಿಕ್ಕಿಯಾದ ಜನ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರು ರಸ್ತೆಯ ತಡೆಗೋಡೆ ಭಾಗದಲ್ಲಿ ಕಲ್ಲು ಇರಿಸಿ ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡಿದ್ದಾರೆ. ಆದಷ್ಟು ಬೇಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಳದಿಂದ ರಿವಿಟ್ ಮೆಂಟ್ ಕಟ್ಟಿ ತಡೆಗೋಡೆ ಏರಿಸಿದರೆ ರಸ್ತೆ ಉಳಿಯುತ್ತದೆ ಎಂದು ವಾಹನ ಸವಾರರು ಹೇಳಿದ್ದಾರೆ.

ಈಗಾಗಲೇ ತಡೆಗೋಡೆ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿದೆ ಎಂದು ಈ ಭಾಗದಲ್ಲಿ ಸಂಚರಿಸುವ ವಾಹನ ಚಾಲಕರು ತಿಳಿಸಿದ್ದು, ಸಂಬಂಧ ಪಟ್ಟ ಅಧಿಕಾರಿಗಳು ತುರ್ತಾಗಿ ಗಮನ ಹರಿಸುವಂತೆ ವಾಹನ ಚಾಲಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...