ಚಿಕ್ಕಮಗಳೂರು | ಅರಿವು ಮೂಡಿಸಿ ನಂತರ ಕಾನೂನು ಕ್ರಮಕ್ಕೆ ಮುಂದಾಗಿ, ಸುಧೀರ್ ಕುಮಾರ್ ಮುರೊಳ್ಳಿ

Date:

ಅರಣ್ಯಾಧಿಕಾರಿಗಳು ಮೊದಲು ಜನರಿಗೆ ಹುಲಿ ಉಗುರಿನಂತಹ ವಸ್ತುಗಳನ್ನು ಇಟ್ಟುಕೊಳ್ಳುವುದು ಅಪರಾಧ ಎಂಬ ಅರಿವು ಮೂಡಿಸಿ ತದನಂತರ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದ್ದಾರೆ.

- Advertisement -

ಸದ್ಯ ರಾಜ್ಯಾದ್ಯಂತ ಸುದ್ದಿಯಲ್ಲಿರುವ ಹುಲಿ ಉಗುರು ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಅ.27) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾಡು ಪ್ರಾಣಿಗಳ  ಉಗುರು, ಚರ್ಮ, ದಂತ, ಜಿಂಕೆಯ ತಲೆ ಹೀಗೆ ಕಾಡು ಪ್ರಾಣಿಗಳ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ವನ್ಯಜೀವಿ ಕಾಯ್ದೆಯ ಪ್ರಕಾರ ಅಪರಾಧ. ಇದೀಗ ಅರಣ್ಯ ಅಧಿಕಾರಿಗಳು ಹಲವು ಕಡೆ  ಸೆಲೆಬ್ರಿಟಿಗಳನ್ನು, ಮಠಾಧೀಶರನ್ನು, ಅರ್ಚಕರ ಮನೆಗಳಲ್ಲಿ ಶೋಧ ನಡೆಸುತ್ತಿದ್ದು, ಕೆಲವರನ್ನು ಬಂಧಿಸಿದ್ದಾರೆ ಎಂದರು.

maroli

ಅರಣ್ಯ ಇಲಾಖೆಯವರು ಹಳ್ಳಿ ಭಾಗದಲ್ಲಿ ಹಲವಾರು ಮನೆಗಳಲ್ಲಿ ನೂರಾರು ವರ್ಷಗಳ ಹಿಂದಿನ ಜಿಂಕೆಯ ತಲೆ, ಕಾಡುಕೋಣದ ತಲೆ ಹೀಗೆ ಹಲವು ವಸ್ತುಗಳನ್ನು ಹವ್ಯಾಸದಿಂದಾಗಿ ಮತ್ತು ಪೂರ್ವಜರ ಕಾಲದ ವಸ್ತುಗಳು ಎಂದು ನೆನಪಿನಲ್ಲಿಟ್ಟುಕೊಳ್ಳುವ ದೃಷ್ಟಿಯಿಂದ ಇಂದು ಕೂಡ ಹಲವು ಮನೆಗಳಲ್ಲಿ ಹಲವು ರೀತಿಯ ಪ್ರಾಣಿಗಳ ವಸ್ತುಗಳು ಇವೆ. ಏಕಾಏಕಿ ಈ ವಸ್ತುಗಳನ್ನು ಸಂಗ್ರಹಿಸಿ, ಇಟ್ಟುಕೊಂಡವರನ್ನು ಬಂಧಿಸುವ ಬದಲು, ಇಂತಹ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಅಪರಾಧ ಎಂದು  ಜನರಿಗೆ ಅರಿವು ಮೂಡಿಸುವ  ಕೆಲಸಕ್ಕೆ ಅರಣ್ಯಾಧಿಕಾರಿಗಳು ಮೊದಲು ಮುಂದಾಗಬೇಕು ಎಂದು ಅಭಿಪ್ರಾಯಿಸಿದರು.

ಜಾಗೃತಿಯ ನಂತರವೂ ಯಾರಾದರೂ ಆ ವಸ್ತುಗಳನ್ನು ಮನೆಯಲ್ಲೇ ಇಟ್ಟುಕೊಂಡಿದ್ದರೆ, ನಿಮ್ಮ ಕಾಯ್ದೆಯ ಪ್ರಕಾರ ಅವರುಗಳ ಮೇಲೆ ಯಾವುದೇ ರೀತಿಯ ಕ್ರಮವನ್ನು ತೆಗೆದುಕೊಳ್ಳುವುದರಲ್ಲಿ ನಮ್ಮ ಆಕ್ಷೇಪವಿಲ್ಲ. ಆದರೆ, ಹಳ್ಳಿಯ ಜನರು ಮುಗ್ಧರು. ಇವುಗಳನ್ನು ಮನೆಯಲ್ಲಿ ಇಟ್ಟುಕೊಂಡರೆ ಅಪರಾಧ ಎಂಬ ಅರಿವು ಸಹ ಇಲ್ಲದ ಜನರಿಗೆ ಮೊದಲು ಅರಿವು ಮೂಡಿಸುವುದು, ಶಾಲಾ ಕಾಲೇಜುಗಳಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಒಳ್ಳೆಯದು ಎಂದರು.

ಕಾಡುಪ್ರಾಣಿಗಳ ಉಗುರು, ಚರ್ಮ ಸೇರಿದಂತೆ ಯಾವುದೇ  ವಸ್ತುಗಳನ್ನು ಸಂಗ್ರಹಿಸಿಡುವುದಕ್ಕೆ ನಮ್ಮ ವಿರೋಧವಿದೆ. ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ. ರಾಜೇಗೌಡರು ಸಹ ಈ ವಿಚಾರವನ್ನು ಈಗಾಗಲೇ ಅರಣ್ಯಾಧಿಕಾರಿಗಳು ಮತ್ತು ಅರಣ್ಯ ಸಚಿವರ ಗಮನಕ್ಕೆ ತಂದಿದ್ದು, ಈ ತರಹದ ಯಾವುದೇ ದೂರು ಬಂದಲ್ಲಿ ಮೊದಲು ಅವರಿಗೆ ನೋಟಿಸ್ ನೀಡಿ, ತದನಂತರ ಮುಂದಿನ ಕಾನೂನು ಕ್ರಮ  ಕೈಗೊಳ್ಳಿ. ಏಕಾಏಕಿ ಬಂಧಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ಸುದ್ದಿಗೋಷ್ಠಿಯಲ್ಲಿ ನುಗ್ಗಿ ಮಂಜುನಾಥ್, ಈನೇಶ್, ಜೆ.ಎಂ. ಶ್ರೀಹರ್ಷ, ನಾರ್ವೆ ನಿಸಾರ್, ಸಂತೋಷ್ ಕುಲಾಸು, ಶ್ರೀಜಿತ್, ಕೀರ್ತಿ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...