ದುಡಿಯುವ ವರ್ಗ ಹಸಿವಿನಿಂದ ಬಳಲುತ್ತಿರುವ ದೇಶದಲ್ಲಿ 284 ಬಿಲಿಯನೇರ್‌ಗಳ ಸೃಷ್ಟಿ ಮೋದಿ ಆಡಳಿತದ ಕೊಡುಗೆ: ಡಾ.ಕೆ ಪ್ರಕಾಶ್

Date:

ನವ ಉದಾರೀಕರಣದ ನೀತಿಗಳು ಅನುಷ್ಠಾನಗೊಂಡ ಮೂರು ದಶಕಗಳ ಈ ಅವಧಿಯಲ್ಲಿ ಭಾರತ ಆರ್ಥಿಕ ಸಮಾನತೆಯ ಉತ್ತುಂಗಕ್ಕೆ ತಲುಪಿದೆ. ಕಾರ್ಮಿಕರು, ಕೂಲಿಕಾರರು ಸೇರಿದಂತೆ ದುಡಿಯುವ ಜನರು ಹಸಿವಿನಿಂದ ಬಳುತ್ತಿದ್ದಾರೆ. ಬಡವರು ಹಸಿವಿನಿಂದ ಬಳಲುತ್ತಿರುವ ಭಾರತದಲ್ಲಿ 284 ಬಿಲಿಯನೇರ್‌ಗಳನ್ನು ಸೃಷ್ಟಿಸಿರುವುದು ಮೋದಿಯವರ ಆಡಳಿತ ಕೊಡುಗೆ ಎಂದು CITU ಕರ್ನಾಟಕ ರಾಜ್ಯ ಉಪಾಧ್ಯಕ್ಷ ಡಾ. ಕೆ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

- Advertisement -

CITU 18ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿರಂತರವಾಗಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ದುಡಿಯುವ ವರ್ಗದ ಪರವಾಗಿ ಯಾವುದೇ ನೀತಿಗಳನ್ನು ಜಾರಿಗೊಳಿಸುತ್ತಿಲ್ಲ. ಇಂತಹ ಸರಕಾರಗಳ ಆಕ್ರಮಣಕಾರಿ ನೀತಿಗಳನ್ನು ಕಾರ್ಮಿಕ ವರ್ಗ ಸಮರಶೀಲ ಹೋರಾಟಗಳ ಮೂಲಕವೇ ಹಿಮ್ಮೆಟ್ಟಿಸಲು ಸಾಧ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

CITU ದ.ಕ. ಜಿಲ್ಲಾಧ್ಯಕ್ಷ ಜೆ ಬಾಲಕೃಷ್ಣ ಶೆಟ್ಟಿ ಮಾತನಾಡಿ, “ಜಿಲ್ಲೆಯ ಕಾರ್ಮಿಕ ಚಳವಳಿಯ ಧೀರೋದತ್ತವಾದ ಹೋರಾಟಗಳನ್ನು ಮೆಲುಕು ಹಾಕುತ್ತಾ, ಮುಂಬರುವ ದಿನಗಳಲ್ಲಿ ಬಲಿಷ್ಠವಾದ ಕಾರ್ಮಿಕ ಚಳವಳಿಯನ್ನು ಕಟ್ಟುವ ಮೂಲಕ ಜಿಲ್ಲೆಯ ಸೌಹಾರ್ದತಾ ಪರಂಪರೆಯನ್ನು ಉಳಿಸಲು ಕಾರ್ಮಿಕ ವರ್ಗ ಕಟಿಬದ್ದರಾಗಿ ಶ್ರಮಿಸಬೇಕು” ಎಂದರು.

ಇದನ್ನೂ ಓದಿ: ದಕ್ಷಿಣ ಕನ್ನಡ | ಉದ್ಯೋಗಕ್ಕಾಗಿ ಡಿವೈಎಫ್ಐ ಬೃಹತ್ ಹೋರಾಟ; ಸೆ.7ರಿಂದ ಯುವ ಜಾಗೃತಿ ಜಾಥಾ

ವೇದಿಕೆಯಲ್ಲಿ CITU ಜಿಲ್ಲಾ ನಾಯಕ ವಸಂತ ಅಚಾರಿ, ಸುಕುಮಾರ್ ತೊಕ್ಕೋಟು, ಬಿ ಎಂ ಭಟ್, ರಮಣಿ ಮೂಡಬಿದ್ರೆ, ಪದ್ಮಾವತಿ ಶೆಟ್ಟಿ, ವಸಂತಿ ಕುಪ್ಪೆಪದವು, ಸುಂದರ ಕುಂಪಲ, ಗಿರಿಜಾ, ಯೋಗೀಶ್ ಜಪ್ಪಿನಮೊಗರು CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಜಿಲ್ಲಾ ಉಪಾಧ್ಯಕ್ಷ ರವಿಚಂದ್ರ ಕೊಂಚಾಡಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...