ಬೆಂಗಳೂರಲ್ಲಿ ಮತ್ತೆ ತಲೆ ಎತ್ತಿದ ಕ್ರಿಕೆಟ್ ಬೆಟ್ಟಿಂಗ್ ದಂಧೆ: 13 ಜನರ ಬಂಧನ

Date:

ವಿಶ್ವಕಪ್ ಕ್ರಿಕೆಟ್ ಟೂರ್ನಿ ನಡೆಯುತ್ತಿರುವಾಗಲೇ ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿದ್ದು, ಈವರೆಗೆ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ, ದೇಶದಲ್ಲಿ ವಿಶ್ವಕಪ್ ಹಿನ್ನೆಲೆಯಲ್ಲಿ ಕ್ರಿಕೆಟ್ ಪಂದ್ಯಾಟಗಳು ನಡೆಯುತ್ತಿವೆ. ಅದರ ಜೊತೆಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ಕೂಡ ನಡೆಯುತ್ತಿದೆ. ಬೆಂಗಳೂರಿನ 11 ಕಡೆಗಳಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರನ್ನು ಪತ್ತೆ ಹಚ್ಚಿ, ಒಟ್ಟು 13 ಮಂದಿಯನ್ನು ಈವರೆಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಟ್ಟಿಂಗ್ ಸಂಬಂಧ 11 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಸುಮಾರು 10 ಲಕ್ಷದಷ್ಟು ಹಣವನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಮೈದಾನದಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸುತ್ತಲೇ ಬೆಟ್ಟಿಂಗ್
ಇತ್ತೀಚೆಗೆ ಅಂದರೆ ಅ. 20ರಂದು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಪಂದ್ಯವಿತ್ತು. ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದ್ದ ಇಬ್ಬರು ಆರೋಪಿಗಳು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕುಳಿತಿದ್ದರು. ಪಂದ್ಯ ಆರಂಭವಾಗುತ್ತಿದ್ದಂತೆ, ಪ್ರತಿಯೊಂದು ಬಾಲ್ ಹಾಗೂ ಇತರೆ ಮಾಹಿತಿಯನ್ನು ಕ್ರಿಕೆಟ್ ಆ್ಯಪ್‌ನಲ್ಲಿ ದಾಖಲಿಸುತ್ತಿದ್ದರು. ಇದರ ಸಹಾಯದಿಂದಲೇ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಬಗ್ಗೆ ವರದಿಯಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಮೈದಾನದಲ್ಲಿ ನಡೆಯುವ ಪಂದ್ಯಕ್ಕೂ ಟಿ.ವಿ.ಯಲ್ಲಿ ಪ್ರಸಾರವಾಗುವ ಪಂದ್ಯಕ್ಕೂ ಕೆಲವು ನಿಮಿಷಗಳ ವ್ಯತ್ಯಾಸವಿರುತ್ತದೆ. ಇದೇ ಕಾರಣಕ್ಕೆ ಆರೋಪಿಗಳು ಮೈದಾನದಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸುತ್ತಲೇ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಪ್ರಕರಣದಲ್ಲಿ ಮಹಾರಾಷ್ಟ್ರ ಮೂಲದ ಓರ್ವ ಮತ್ತು ಮಧ್ಯಪ್ರದೇಶದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡದಿರುವಂತೆ ಒತ್ತಾಯಿಸಿ ರೈತ ಸಂಘದ ಮನವಿ

ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡಬೇಡಿ, ಒಂದು ವೇಳೆ ಬಿಟ್ಟರೆ ಲಕ್ಷಾಂತರ...

ಬೆಂಗಳೂರು | ಬಿಸಿಲಿನ ತಾಪ ಕೊಂಚ ಕಡಿಮೆ ಮಾಡಿದ ತುಂತುರು ಮಳೆ

ಬಿಸಿಲಿನ ಶಾಖಕ್ಕೆ ಬೇಸತ್ತಿದ ಬೆಂಗಳೂರಿನ ಜನತೆಗೆ ಶನಿವಾರ ಮಳೆಯ ದರ್ಶನವಾಗಿದೆ. ಬೆಂಗಳೂರಿನಲ್ಲಿ...

ಮಂಗಳೂರು | ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ಮಾಜಿ ಮೇಯರ್ ಕವಿತಾ ಸನಿಲ್; ಬಿಜೆಪಿ ಸೇರ್ಪಡೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್...

ಕೇಂದ್ರದಲ್ಲಿ ಪ್ರಜಾಸತ್ತಾತ್ಮಕ, ಜಾತ್ಯತೀತ ಸರ್ಕಾರ ರಚನೆಯಾಗಬೇಕು: ಸಂವಿಧಾನ ರಕ್ಷಣಾ ವೇದಿಕೆ

ಪ್ರಜಾಪ್ರಭುತ್ವ ಉಳಿಸಿ - ಸಂವಿಧಾನವನ್ನು ರಕ್ಷಿಸಲು, ಈ ಬಾರಿ ಕೇಂದ್ರದಲ್ಲಿ ಪ್ರಜಾಸತ್ತಾತ್ಮಕ...