ಬೀದರ್‌ | ಸರಕಾರಿ ನೌಕರರು ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದರೆ ಕ್ರಮ : ಡಿಸಿ ಗೋವಿಂದರೆಡ್ಡಿ

Date:

ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಲ್ಲಿ ಭಾಗವಹಿಸುವದು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಪರ ಹಾಗೂ ವಿರೋಧವಾಗಿ ಪೋಸ್ಟ್, ಕಮೆಂಟ್, ಫಾರ್ವರ್ಡ್, ವೈಯಕ್ತಿಕವಾಗಿ ಮಾಡುವ ದೂರುಗಳು ಬಂದಲ್ಲಿ ಅಮಾನತುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಗೋವಿಂದರೆಡ್ಡಿ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
“ಈಗ ಸಮಯ ಬಹಳ ಕಡಿಮೆ ಇರುವುದರಿಂದ ಸೆಕ್ಟರ್ ಅಧಿಕಾರಿಗಳು ಪೋಲಿಂಗ್ ಬೂತ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಕ್ರಿಟಿಕಲ್ ಮತ್ತು ವಲ್ನರೇಬಲ್ ಪೋಲಿಂಗ್ ಬೂತ್‌ಗಳ ಮಾಹಿತಿ ತಮ್ಮಲ್ಲಿ ಇರಬೇಕು ಮತ್ತು ಮತಗಟ್ಟೆ ಬದಲಾಗಿದ್ದರೆ ಅದರ ಮಾಹಿತಿಯನ್ನು ನೀಡಬೇಕು” ಎಂದು ಹೇಳಿದರು.
ಚುನಾವಣೆ ನೀತಿ ಸಂಹಿತೆ ಜಾರಿಯಾದ 24 ಗಂಟೆಯಲ್ಲಿ ಕಟೌಟ್, ಪೋಸ್ಟರ್, ಬ್ಯಾನರ್ ತೆರವುಗೊಳಿಸಬೇಕು. ನಗರಗಳಲ್ಲಿ ನಗರಸಭೆ ಮತ್ತು ಗ್ರಾಮಗಳಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಪೋಸ್ಟರ್, ಬ್ಯಾನರ್ ತೆರವುಗೊಳಿಸುವಂತೆ ನೋಡಿಕೊಳ್ಳಬೇಕು. ಎಫ್.ಎಸ್.ಟಿ ಹಾಗೂ ಎಸ್.ಎಸ್.ಟಿ ತಂಡಗಳು ತಮ್ಮ ಕಾರ್ಯ ಪ್ರಾರಂಭಿಸಬೇಕು. ಚುನಾವಣೆಗೆ ನಿಯೋಜಿತ ಅಧಿಕಾರಿಗಳು ತಮ್ಮ ಪರವಾಗಿ ಬೇರೆ ಸಿಬ್ಬಂದಿಗಳಿಗೆ ಕಳಿಸುವ ಹಾಗಿಲ್ಲ. ಹಾಗೆ ಕಂಡು ಬಂದಲ್ಲಿ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ತಮ್ಮ ಸಮಸ್ಯೆಯ ಅನಿವಾರ್ಯ ಕಾರಣಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು” ಎಂದರು.
“ಅನುಮತಿ ಇಲ್ಲದೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ವಾಹನಗಳು ಕಂಡು ಬಂದಲ್ಲಿ ಅವುಗಳನ್ನು ಸೀಜ್ ಮಾಡಿ ಚುನಾವಣೆ ಮುಗಿಯುವತನಕ ಬಿಡಬಾರದು. ರೋಡ್ ಶೋಗೆ ಅನುಮತಿ ನೀಡುವಾಗ ಹತ್ತು ವಾಹನಗಳ ನಂತರ ನೂರು ಮೀಟರ್ ಅಂತರ ಕಾಯ್ದುಕೊಂಡು ಹೋಗುವಂತೆ ತಿಳಿಸಬೇಕು ಹಾಗೂ ಜನನಿಬೀಡ ಪ್ರದೇಶ ಮಾರ್ಕೆಟ್, ಆಸ್ಪತ್ರೆ, ಟ್ರಾಮಾ ಸೆಂಟರ್ ನಂತಹ ಪ್ರದೇಶಗಳಲ್ಲಿ ಅನುಮತಿ ನೀಡಬಾರದು ಹಾಗೂ ಪ್ರಾಣಿ ಮತ್ತು ಮಕ್ಕಳನ್ನು ರೋಡ ಶೋ ಸಂದರ್ಭದಲ್ಲಿ ಬಳಸುವ‌ ಹಾಗಿಲ್ಲ” ಎಂದು ಹೇಳಿದರು.
ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಚುನಾವಣಾ ಪ್ರಚಾರಕ್ಕೆ ಅವಕಾಶ :
“ಯಾವುದೇ ರಾಜಕೀಯ ಪಕ್ಷಗಳ ಸಭೆ, ಸಮಾರಂಭ ಹಾಗೂ ರೋಡ್ ಶೋ ಗೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಮಾತ್ರ ಕಾಲವಕಾಶ ಇರುತ್ತದೆ. ಮನೆಗಳ ಮೇಲೆ ಗೋಡೆ ಬರಹ ಹಾಗೂ ಬ್ಯಾನರ್‌ಗಳನ್ನು ಕಟ್ಟಬೇಕಾದಲ್ಲಿ ಆ ಮನೆಯ ಮಾಲೀಕರ ಅನುಮತಿ ಇರಬೇಕು. ಪೋಲಿಂಗ್ ಬೂತ್ ನೂರು ಮೀಟರ್ ಒಳಗಡೆ ಯಾವುದೇ ರಾಜಕೀಯ ಪಕ್ಷಗಳ ಸಂಕೇತವಿರುವ ಟೋಪಿ, ಶಾಲು ಧರಿಸಿಕೊಂಡು ಬರುವಂತಿಲ್ಲ” ಎಂದು ಹೇಳಿದರು.
ಬೇಸಿಗೆ ಇರುವುದರಿಂದ ಕುಡಿಯುವ ನೀರಿಗಾಗಿ ಹೊಸ ಬೋರವೆಲ್ ಕೊರೆಯಬಹುದು. ದನಕರುಗಳಿಗೆ ಮೇವು ಹಾಗೂ ಉದ್ಯೋಗ ಖಾತ್ರಿ ಕೆಲಸಗಳಿಗೆ ಯಾವುದೇ ನಿರ್ಬಂಧಗಳಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಊಟ ಕೊಡುವ ಹಾಗಿಲ್ಲ. ಆದರೆ ನೀರು ಮತ್ತು ಮಜ್ಜಿಗೆ ಕೊಡಲು ಮಾತ್ರ ಅವಕಾಶವಿರುತ್ತದೆ. ಹಳ್ಳಿಗಳಲ್ಲಿ ಮದ್ಯ ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
“ಚುನಾವಣೆ ಸಂದರ್ಭದಲ್ಲಿ ಅಧಿಕಾರಿಗಳು ರಜೆಯ ಮೇಲೆ ಹೋಗುವ ಹಾಗಿಲ್ಲ ಹಾಗೂ ಮೊಬೈಲ್ ಸ್ವಿಚ್ ಆಫ್ ಇಡುವ ಹಾಗಿಲ್ಲ. ಹಾಗೇನಾದರು ಕಂಡು ಬಂದಲ್ಲಿ ಮುಲಾಜಿಲ್ಲದೆ ತಮ್ಮ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ, “ಎಲ್ಲರೂ ತಂಡದ ರೀತಿಯಲ್ಲಿ ಕೆಲಸ ಮಾಡಬೇಕು. ವಿಶೇಷವಾಗಿ ಪೊಲೀಸ್ ಅಧಿಕಾರಿಗಳು ಹೆಚ್ಚು ಗಸ್ತು ತಿರುಗಬೇಕು. ಕರ್ತವ್ಯದ ಸಮಯದಲ್ಲಿ ಏನಾದರೂ ಸಮಸ್ಯೆಗಳಾದರೆ ಮುಂಚಿತವಾಗಿ ನಮ್ಮ ಗಮನಕ್ಕೆ ತರಬೇಕು. ಜಿಲ್ಲಾಧಿಕಾರಿಗಳು ನಾವು ಯಾವಾಗ ಭೇಟಿ ನೀಡುತ್ತೇವೆ ಗೊತ್ತಿರುವುದಿಲ್ಲ. ನಾವು ಬಂದಾಗ ತಾವು ಕರ್ತವ್ಯದಲ್ಲಿ ಇರಬೇಕು. ಒಂದು ವೇಳೆ ಇರದೇ ಯಾವುದೇ ನೆಪ ಹೇಳಿದರೂ ನಾವು ಕೇಳುವುದಿಲ್ಲ. ಇದು ಚುನಾವಣೆ ಕರ್ತವ್ಯ ಆಗಿರುವುದರಿಂದ ಎಲ್ಲರೂ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು” ಎಂದು ಸೂಚಿಸಿದರು.
ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶಿಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಚುನಾವಣೆಗೆ ನಿಯೋಜಿತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...