ಕೊಡಗು | ಮನೆಯಲ್ಲಿ ಪುಸ್ತಕ ಸಂಸ್ಕೃತಿ ಬೆಳೆಸಿಕೊಳ್ಳಿ: ಅಜ್ಜಿನಿಕಂಡ ಮಹೇಶ್ ನಾಚಯ್ಯ ಕರೆ

Date:

ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಪುಸ್ತಕ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಕರೆ ನೀಡಿದರು.

- Advertisement -

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಜಿಲ್ಲೆ, ಸೋಮವಾರಪೇಟೆ ಕೊಡವ ಸಮಾಜದಲ್ಲಿ ಆಯೋಜಿಸಿದ್ದ 6ನೇ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ‘ಜ್ಞಾನವಿದ್ದರೆ ಸಕಲ ಐಶ್ವರ್ಯ ಇದ್ದಂತೆ, ಜ್ಞಾನಾರ್ಜನೆಗೆ ಪುಸ್ತಕ ಸಂಸ್ಕೃತಿ ಅತ್ಯವಶ್ಯಕ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಕೊಡವರ ಸಾಮಾಜಿಕ ವ್ಯವಸ್ಥೆಯಲ್ಲಿ ತಮ್ಮದೇ ಆದ ಸಂಸ್ಕೃತಿ ಇರುವಂತೆ, ಪುಸ್ತಕ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವುದರಿಂದ ಅನಿಷ್ಟ ಸಂಸ್ಕೃತಿಗಳಿಂದ ದೂರವಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಸೋಮವಾರಪೇಟೆ ಕೊಡವ ಸಮಾಜವು ಈ ಭಾಗದ ಜನಾಂಗ ಬಾಂಧವರಿಗೆ ಐನ್‍ಮನೆ ಇದ್ದಂತೆ ಎಂದ ಅವರು, ಇಂತಹ ಸ್ಥಳದಲ್ಲಿ ಪುಸ್ತಕ ಪತ್ತಾಯ ಸ್ಥಾಪನೆಗೆ ಮುಂದಾಗಿರುವ ಅಧ್ಯಕ್ಷ ಮಾಳೇಟಿರ ಅಭಿಮನ್ಯು ಕುಮಾರ್ ಹಾಗೂ ನಿರ್ದೇಶಕರನ್ನು ಅಭಿನಂದಿಸಿದರು”.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯರಾದ ಕಲ್ಲೇಂಗಡ ಅಪ್ಪಚ್ಚು, “ಸಾಹಿತ್ಯದ ಮೂಲಕ ಸಂಸ್ಕೃತಿ ಉಳಿಯುತ್ತದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ತಮ್ಮ ಮೂಲ ನೆಲದಲ್ಲೇ ಬದುಕು ಕಟ್ಟಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು. ಅಕಾಡೆಮಿಯ ಪುಸ್ತಕ ಪತ್ತಾಯ ಯೋಜನೆ ಸಾಹಿತ್ಯಾಭಿವೃದ್ಧಿಗೆ ಸಹಕಾರಿಯಾಗಲಿದೆ” ಎಂದು ಅಭಿಪ್ರಾಯಪಟ್ಟರು.

ಕವಯಿತ್ರಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ನಾವು ಸಾಹಿತ್ಯದಿಂದ ದೂರವಾಗುತ್ತಿರುವುದು ಜೀವನದಲ್ಲಿ ವ್ಯತ್ಯಯಕ್ಕೆ ಕಾರಣವಾಗಿದೆ. ಮಕ್ಕಳಲ್ಲಿ ಸಾಹಿತ್ಯಾಭಿಮಾನ ಬೆಳೆಸಲು ಪುಸ್ತಕ ಪತ್ತಾಯ ಉತ್ತಮ ವೇದಿಕೆಯಾಗಿದೆ” ಎಂದರು.

ಈ ಸಂದರ್ಭದಲ್ಲಿ ಕರೋಟಿರ ಶಶಿ ಸುಬ್ರಮಣಿ ಅವರ ‘ನಂಬಿಕೆ ಪುರಾಣತ್‍ರ ನಡುಲ್ ಕೊಡವಡ ಸಾಂಸ್ಕೃತಿಕ ಬದಕ್’ ಕೃತಿಯ ದ್ವಿತೀಯ ಮುದ್ರಣವನ್ನು ಬಿಡುಗಡೆಗೊಳಿಸಲಾಯಿತು. ನಂತರ ಮಾತನಾಡಿದ ಅವರು, “ಕೊಡವ ಸಾಹಿತ್ಯದ ಮೂಲಕ ಸಂಸ್ಕೃತಿ ಹಾಗೂ ನಂಬಿಕೆಗಳು ಜೀವಂತವಾಗಿವೆ. ಕೊಡವ ಭಾಷೆಯಲ್ಲಿ ಹೆಚ್ಚಿನ ಸಂಶೋಧನಾ ಸಾಹಿತ್ಯ ರಚನೆ ಅಗತ್ಯವಿದೆ” ಎಂದು ತಿಳಿಸಿದರು.

ಅಕಾಡೆಮಿಯ ಮಾಜಿ ಸದಸ್ಯ ತೇಲಪಂಡ ಕವನ್ ಕಾರ್ಯಪ್ಪ ‘ಕೊಡವ ಪುಸ್ತಕತ್‍ರ ಅವಶ್ಯಕತೆ ಮತ್ತು ಪ್ರಯೋಜನ’ ವಿಷಯವಾಗಿ ಮಾತನಾಡಿ, ‘ಜಾನಪದ ಸಾಹಿತ್ಯ ಹಾಗೂ ಆಧುನಿಕ ಬರಹಗಳು ಕೊಡವ ಸಂಸ್ಕೃತಿಯನ್ನು ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ’ ಎಂದರು.

ಈ ಸುದ್ದಿ ಓದಿದ್ದೀರಾ? ಯುವಜನರಿಗಾಗಿ ಭಾಷಣ–ಪ್ರಬಂಧ ಸ್ಪರ್ಧೆ: ಏಪ್ರಿಲ್ 20ರಂದು ಮೈಸೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯಿಂದ ಆಯೋಜನೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡವ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯು ಕುಮಾರ್ ಮಾತನಾಡಿ, “ಗ್ರಂಥಾಲಯ ಸ್ಥಾಪನೆ ನಮ್ಮ ಬಹುಕಾಲದ ಕನಸಾಗಿತ್ತು. ಅಕಾಡೆಮಿಯ ಯೋಜನೆಯಿಂದ ಅದು ನೆರವೇರಿದಂತಾಗಿದೆ ಎಂದರು. ಸಮಾಜಗಳಲ್ಲಿ ಪುಸ್ತಕ ಪತ್ತಾಯ ಸ್ಥಾಪನೆಯಿಂದ ಸಂಸ್ಕೃತಿ, ಆಚರಣೆಗಳು ಮತ್ತು ಹಬ್ಬಗಳ ಬಗ್ಗೆ ಅರಿವು ಮೂಡಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಬ್ಬಿನ ಬಾಕಿ ಹಣ ಬಿಡುಗಡೆ ಮಾಡಲು ರೈತ ಸಂಘ ಆಗ್ರಹ

ಕಾರ್ಯಕ್ರಮದಲ್ಲಿ ಜಾನಪದ ಗಾಯಕ ‘ಕೊಡವ್ ನಾಡ್’ ಗೀತೆಯನ್ನು ಹಾಡಿ ಹಾಡಿದರು. ಮಚ್ಚಂಡ ಪ್ರಕಾಶ್ ಸ್ವಾಗತಿಸಿದರು. ಹಂಚೆಟ್ಟಿರ ಸಾರಿಕ ತಮ್ಮಯ್ಯ ಪ್ರಾರ್ಥಿಸಿದರು. ಕಂಬೆಯಂಡ ಡೀನಾ ಬೋಜಣ್ಣ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಕೊಚ್ಚೆರ ಅನಿಲ್ ಕುಮಾರ್, ಪಾಡೆಯಂಡ ಮುತ್ತಣ್ಣ, ಬಾಚಿನಾಡಂಡ ಇಂದಿರಾ ಚಿಂಗಪ್ಪ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...