ದ.ಕ. | ಬ್ಯೂಟಿಪಾರ್ಲರ್ ಹೆಸರಿನಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ವಿಮೆನ್ ಇಂಡಿಯಾ ಮೂವ್ಮೆಂಟ್

Date:

ಬ್ಯೂಟಿಪಾರ್ಲರ್ ಹೆಸರಲ್ಲಿ ತನ್ನ ಪಾರ್ಲರ್‌ನ ಒಬ್ಬಳು ಮಹಿಳಾ ಸಿಬ್ಬಂದಿಗೆ ತನ್ನ ಇತರ ಸಿಬ್ಬಂದಿಗಳ ಮೂಲಕ ಹಲ್ಲೆ ನಡೆಸಿ ಅರೆಬೆತ್ತಲೆಗೊಳಿಸಿ ಅಶ್ಲೀಲ ಪೋಟೋಗಳನ್ನು ತೆಗೆಸಿ ಬ್ಲಾಕ್ ಮೇಲ್ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಇದೀಗ ಸಂತ್ರಸ್ತೆಯು ಇದರ ವಿರುದ್ಧ ಮಂಗಳೂರಿನ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಅವರನ್ನು ಸಂಪರ್ಕಿಸಿ ಪೋಲಿಸರಿಗೆ ದೂರು ನೀಡಿರುತ್ತಾರೆ. ಇದೊಂದು ಅತ್ಯಂತ ಹೀನಾಯವಾದ ಹಾಗೂ ಮಹಿಳಾ ಸಮಾಜ ತಲೆ ತಗ್ಗಿಸುವಂತಹ ಹೇಯ ಕೃತ್ಯವಾಗಿದೆ. ಈ ಕೃತ್ಯವನ್ನು ವಿಮೆನ್ ಇಂಡಿಯಾ ಮೂವೆಂಟ್ (WIM) ತೀವ್ರವಾಗಿ ಖಂಡಿಸುತ್ತದೆ ಎಂದು ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ನಿಶಾ ವಾಮಂಜೂರು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಇದನ್ನೂ ಓದಿ: ಮಂಗಳೂರು | ತುಳು ಭಾಷೆಗೆ ಶೀಘ್ರ ಅಧಿಕೃತ ಸ್ಥಾನಮಾನ ಲಭಿಸಲಿ: ಚಂದ್ರಕಲಾ ನಂದಾವರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಸಕ್ತ ಬ್ಯೂಟಿಪಾರ್ಲರ್‌ನ ಮಾಲಕಿಯನ್ನು ಹಾಗೂ ಅಲ್ಲಿರುವ ಇತರ ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ಕೂಡಲೇ ಬ್ಯೂಟಿಪಾರ್ಲರನ್ನು ಶಾಶ್ವತವಾಗಿ ಮುಚ್ಚಿಸಬೇಕೆಂದು ಆಗ್ರಹಿಸಿದರು.

ಅಲ್ಲದೆ ಇಂತಹ ಬ್ಯೂಟಿಪಾರ್ಲರ್ ಹಾಗೂ ಮಸಾಜ್‌ ಸೆಂಟರ್‌ಗಳ ಹೆಸರುಗಳಲ್ಲಿ ಬೆಳಕಿಗೆ ಬಾರದ ಎಷ್ಟೋ ಘಟನೆಗಳು ನಡೆಯುತ್ತಿರುತ್ತವೆ ಎಂದು ಸಾಮಾಜಿಕ ವಲಯದಲ್ಲಿ ಕೇಳಿಬರುತ್ತಿದ್ದು, ಪೊಲೀಸ್‌ ಇಲಾಖೆಯು ಇಂತಹ ಅನೈತಿಕ ಚಟುವಟಿಕೆಗಳನ್ನು ನಡೆಸುವ ಅಂಗಡಿಗಳನ್ನು ಶೀಘ್ರವೇ ಪತ್ತೆಹಚ್ಚಿ ಶಾಶ್ವತವಾಗಿ ಮುಚ್ಚಿಸಬೇಕು ಮತ್ತು ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...