ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

Date:

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು ಜನಸ್ನೇಹಿಗೊಳಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಕಲಬುರಗಿ ಮಹಾನಗರ ಪಾಲಿಕೆಯ ನೂತನ ಮಹಾಪೌರ ಶೇಖ್ ಅಜ್ವಲ್ ಅಹ್ಮದ್ ಅಫೈಲ್ ಗೋಲಾ ಹೇಳಿದರು.

- Advertisement -

ಮಹಾನಗರ ಪಾಲಿಕೆಯ 24ನೇ ಅವಧಿಯ ಮಹಾಪೌರರಾಗಿ ಶೇಖ್ ಅಜ್ವಲ್ ಅಹ್ಮದ್ ಹಾಗೂ ಉಪ ಮಹಾಪೌರರಾಗಿ ಖುಸ್ರೋ ಫರ್ಹಾನಾಝ್ ಅವರು ಮಂಗಳವಾರ ಪಾಲಿಕೆ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅಜ್ವಲ್ ಅಹ್ಮದ್, ನಗರದ ಕುಡಿಯುವ ನೀರಿನ ಸಮಸ್ಯೆ, ತ್ಯಾಜ್ಯ ವಿಲೇವಾರಿ ಹಾಗೂ ಬೀದಿ ನಾಯಿಗಳ ಹಾವಳಿ ಸೇರಿದಂತೆ ಸಾರ್ವಜನಿಕರ ದಿನನಿತ್ಯದ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಆದ್ಯತೆಯ ಮೇರೆಗೆ ಪರಿಹರಿಸಲಾಗುವುದು ಎಂದು ತಿಳಿಸಿದರು.

ಅಭಿವೃದ್ಧಿಗೆ ಹೊಸ ಯೋಜನೆಗಳ ರೂಪುರೇಷೆ

ನಗರದ ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಮಳೆನೀರು ಕೊಯ್ಲು ಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪ್ರತಿಯೊಂದು ಮನೆಗೂ ಸಸಿ ನೆಡುವ ಅಭಿಯಾನ ಕೈಗೊಂಡು ಹಸಿರು ಕಲಬುರಗಿ ನಿರ್ಮಾಣಕ್ಕೆ ಮುಂದಾಗಲಾಗುವುದು ಎಂದರು.

ಪಾಲಿಕೆಯ ಆಡಳಿತ ಮತ್ತು ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಲು ಕಂಟ್ರೋಲ್ ಕಮಾಂಡ್ ಸೆಂಟರ್ ಸ್ಥಾಪಿಸುವ ಉದ್ದೇಶವಿದ್ದು, ಇದರಿಂದ ನಗರದ ವಿವಿಧ ಸಮಸ್ಯೆಗಳ ಮೇಲ್ವಿಚಾರಣೆ ಹಾಗೂ ಅಧಿಕಾರಿಗಳ ಸ್ಪಂದನೆಗೆ ವೇಗ ದೊರೆಯಲಿದೆ ಎಂದು ಹೇಳಿದರು.

ಜನರ ಸಮಸ್ಯೆಗಳನ್ನು ಚರ್ಚಿಸಿ ತ್ವರಿತ ನಿರ್ಧಾರ ಕೈಗೊಳ್ಳಲು ಪಾಲಿಕೆಯ ಸಾಮಾನ್ಯ ಸಭೆಗಳನ್ನು ನಿಯಮಿತವಾಗಿ ನಡೆಸಲಾಗುವುದು. ಜನೋಪಯೋಗಿ ವಿಷಯಗಳಿಗೆ ಸಭೆಗಳಲ್ಲಿ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪಾಲಿಕೆ ಆಡಳಿತವನ್ನು ಹೆಚ್ಚು ಕ್ರಿಯಾಶೀಲಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ತಂದೆಯ ಹಾದಿಯಲ್ಲಿ ಮಗನಿಗೆ ಮಹಾಪೌರ ಹುದ್ದೆ

ತಮ್ಮ ತಂದೆ 1991ರಲ್ಲಿ ಕಲಬುರಗಿ ಮಹಾಪೌರರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಸುಮಾರು 35 ವರ್ಷಗಳ ಬಳಿಕ ತಮಗೂ ಅದೇ ಹುದ್ದೆ ಅಲಂಕರಿಸಿ ನಗರದ ಸೇವೆ ಮಾಡುವ ಅವಕಾಶ ದೊರೆತಿರುವುದು ಹೆಮ್ಮೆಯ ಹಾಗೂ ಭಾವನಾತ್ಮಕ ಕ್ಷಣವಾಗಿದೆ ಎಂದು ಅಜ್ವಲ್ ಅಹ್ಮದ್ ಹೇಳಿದರು.

ನೂತನ ಮಹಾಪೌರ ಹಾಗೂ ಉಪ ಮಹಾಪೌರರ ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಪಕ್ಷದ ಮುಖಂಡರು, ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಅಭಿನಂದಿಸಿ ಶುಭಾಶಯ ಕೋರಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಈ ಸಂದರ್ಭದಲ್ಲಿ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕಿರಣ್ ದೇಶಮುಖ ಸೇರಿದಂತೆ ಹಲವು ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...