ಬೀದರ್‌ | ಜನರ ದುರಾಸೆಗಳಿಂದ ಸೈಬರ್ ಅಪರಾಧ ಹೆಚ್ಚಳ : ಎಡಿಜಿಪಿ ಅಲೋಕ ಕುಮಾರ

Date:

Advertisements

ಇತ್ತಿಚೆಗೆ ಸೈಬರ ಅಪರಾಧಗಳು ಹೆಚ್ಚಾಗಲು ಜನರ ದುರಾಸೆಗಳೆ ಕಾರಣವಾಗುತ್ತಿದ್ದು, ಸಾರ್ವಜನಿಕರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಿ ಅನಾಮಧೇಯ ಮೊಬೈಲ್ ಸಂದೇಶ, ಲಿಂಕ್‌ಗಳು ಮತ್ತು ಕರೆಗಳಿಗೆ ಸ್ಪಂದನೆ ನೀಡಬಾರದು ಎಂದು ಬೆಂಗಳೂರು ತರಬೇತಿ ಕೇಂದ್ರದ ಎಡಿಜಿಪಿ ಅಲೋಕ ಕುಮಾರ ಹೇಳಿದರು.

ಮಂಗಳವಾರ ಬೀದರ ಜಿಲ್ಲಾ ವರಿಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಬೀದರ ಜಿಲ್ಲೆಯ ಸಾರ್ವಜನಿಕರೊಂದಿಗೆ ಜನಸ್ಪಂದನ ಸಭೆ ನಡೆಸಿ ಮಾತನಾಡಿ, “ಸಾರ್ವಜನಿಕರು ತಮ್ಮ ವೈಯಕ್ತಿಯ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕವಾಗಿ ಹಂಚಿಕೊಳ್ಳಬಾರದು. ತಮಗೆ ಯಾವುದೇ ರೀತಿಯ ಮೋಸವಾದರೆ ತಕ್ಷಣೆ ಪೊಲೀಸರಿಗೆ ಮಾಹಿತಿ ನೀಡಬೇಕು. ಅಂದಾಗ ಅಪರಾಧಗಳಿಗೆ ಕಡಿವಾಣ ಹಾಕಲು ಸಹಾಯವಾಗುತ್ತದೆ. ಇತ್ತೀಚೆಗೆ ಸೈಬರ್ ಅಪರಾಧವು ಹೊಸ ಸ್ವರೂಪದಲ್ಲಿ ಬದಲಾವಣೆಯಾಗುತ್ತಿದೆ ಹಾಗಾಗಿ ಸಾರ್ವಜನಿಕರು ಎಚ್ಚರ ವಹಿಸಬೇಕು” ಎಂದರು.

“ಬೀದರ ಜಿಲ್ಲೆಗೆ ಈ ಹಿಂದೆ ಆರರಿಂದ ಏಳು ಸಲ ಬಂದಿದ್ದೇನೆ. ಭಾಲ್ಕಿ ಮತ್ತು ಔರಾದ ತಾಲೂಕಿಗೆ ಭೇಟಿ ನೀಡಿದ್ದೆನೆ. ಬೀದರ ಜಿಲ್ಲೆಯಲ್ಲಿ ಗಣೇಶ, ಮೋಹರಂ ಸೇರಿದಂತೆ ಎಲ್ಲಾ ಹಬ್ಬಗಳನ್ನು ಶಾಂತಿಯುತವಾಗಿ ಆಚರಣೆ ಮಾಡಲು ಹಾಗೂ ಯಾವುದೇ ಅಹಿತರ ಘಟನೆಗಳನ್ನು ನಡೆಯದಂತೆ ಜಿಲ್ಲೆಯ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಪಾಲನೆ ಮಾಡುತ್ತಿದ್ದಾರೆ” ಎಂದು ಹೇಳಿದರು.

Advertisements

“ಸಂಚಾರ ನಿಯಮಗಳು ಪಾಲನೆ ಮಾಡದೆ ಇರುವುದರಿಂದ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಸಾಕಷ್ಟು ಸಾವುಗಳು ಸಂಭವಿಸುತ್ತಿವೆ. ಅದರಲ್ಲೂ ಮುಖ್ಯವಾಗಿ ಹೆಲ್ಮೇಟ್ ಧರಿಸದಿರುವುದ್ದರಿಂದ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಅರಿವು ಮೂಡಿಸಿ ಸಾವುಗಳ ಸಂಖ್ಯೆ ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದೆ. ಸಾರ್ವಜನಿಕರು ಸಹ ಪೊಲೀಸ್ ಇಲಾಖೆಗೆ ಇನ್ನು ಹೆಚ್ಚಿನ ಸಹಕಾರ ನೀಡಬೇಕು. ಹೆಲ್ಮೇಟ್ ಹಾಕುವುದರಿಂದ ದಂಡ ಕಟ್ಟುವುದು ತಪ್ಪುತ್ತದೆ ಎನ್ನುವ ಭಾವನೆಯಿಂದ ಹೆಲ್ಮೇಟ್ ಹಾಕದೆ, ತಮ್ಮ ಜೀವ ಉಳಿಯುತ್ತದೆ ಎನ್ನುವ ಭಾವನೆಯಿಂದ ಎಲ್ಲರೂ ಹೆಲ್ಮೇಟ್ ಕಡ್ಡಾಯವಾಗಿ ಧರಿಸಬೇಕು” ಎಂದರು.

ಇದೇ ಸಂದರ್ಭದಲ್ಲಿ ಪೊಲೀಸರು ಜಿಲ್ಲೆಯಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಭೇದಿಸಿ ಜಪ್ತಿ ಮಾಡಿದ ಸ್ವತ್ತುಗಳನ್ನು ಅದರ ಮಾಲೀಕರಿಗೆ ಎಡಿಜಿಪಿ ಅಲೋಕ ಕುಮಾರ ಅವರು ಹಸ್ತಾಂತರಿಸಿ. ಸಾರ್ವಜನಿಕರ ದೂರುಗಳನ್ನು ಆಲಿಸಿ ಅವುಗಳಿಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸದಾಶಿವ ಆಯೋಗದದ ವರದಿ ಜಾರಿಗೆ ಬಿಎಸ್‌ಪಿ ಒತ್ತಾಯ

ಈ ಸಭೆಯಲ್ಲಿ ಕಲಬುರ್ಗಿ ವಿಭಾಗದ ಡಿಐಜಿ ಅಜಯ್ ಹಿಲ್ಲೋರಿ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ, ಬೀದರ ಉಪ ಪೊಲೀಸ್ ಅಧೀಕ್ಷಕ ಶಿವನಗೌಡ ಪಾಟೀಲ್, ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X