ಬಿಪರ್‌ಜಾಯ್‌ ಚಂಡಮಾರುತ; ಕೆಲವೆಡೆ ಸೃಷ್ಟಿಯಾದ ಅವಾಂತರ

Date:

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬಿಪರ್‌ಜಾಯ್ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಿಕ್ಕಮಗಳೂರಿನಲ್ಲಿ ಗುರುವಾರ ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಳ್ಳ-ಕೊಳ್ಳಗಳು ಉಕ್ಕಿ ಹರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತವಾಗಿದೆ. ಜಿಲ್ಲೆಯ ಸಕರಾಯಪಟ್ಟಣ, ಹುಲಿಕೆರೆ, ಕೇತುಮಾರನಹಳ್ಳಿಯಲ್ಲಿ ಭಾರೀ ಮಳೆಯಿಂದಾಗಿ ಕೆರೆಗಳು ಕೋಡಿ ಬಿದ್ದಿವೆ. ಇದರಿಂದಾಗಿ ರಸ್ತೆಯ ಮೇಲೆ ನೀರು ಹರಿದು ಕೆಲಕಾಲ ಸಂಚಾರಕ್ಕೆ ತೊಡಕುಂಟಾಗಿದೆ. ಜತೆಗೆ ಜಮೀನು ಗದ್ದೆಗಳಿಗೆ ನೀರು ನುಗ್ಗಿದ್ದು ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ದಿಢೀರನೆ ಸುರಿದ ಮಳೆಯಿಂದಾಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಹೀಗಾಗಿ ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಪ್ರವಾಸಿಗರು ಸಮುದ್ರದ ತೀರಕ್ಕೆ, ನದಿಯ ಬಳಿ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಿಪರ್‌ಜಾಯ್ ಚಂಡಮಾರುತ; ಅರಬ್ಬಿ ಸಮುದ್ರ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಯಾದಗಿರಿಯಲ್ಲಿ ವ್ಯಾಪಕ ಮಳೆಯಾಗಿದ್ದು, ಮರಗಳು ಧರೆಗುರುಳಿದ್ದು, ಮನೆಯ ಕೆಲವು ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮಳೆ ಬಂದರೂ ತಂಪಿನ ವಾತಾವರಣಕ್ಕಿಂತ ಧಗೆ ಹೆಚ್ಚಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...