ರಾಜ್ಯದಲ್ಲಿ ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ‘ಸೆನ್ಯಾರ್ʼ ಚಂಡಮಾರುತದಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
“ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಡಿಸೆಂಬರ್ 1ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ” ಎಂದು ಭಾರತೀಯ ಹವಾಮಾನ ಇಲಾಖೆ(IMD)ಯ ಇತ್ತೀಚಿನ ವರದಿ ತಿಳಿಸಿದೆ.
“ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಈಗಾಗಲೇ ಮತ್ತೊಂದು ಕಡಿಮೆ ಒತ್ತಡದ ವ್ಯವಸ್ಥೆ ರೂಪುಗೊಂಡಿದ್ದು, ಇದು ಉತ್ತರ-ವಾಯುವ್ಯ ದಿಕ್ಕಿನತ್ತ ಸಾಗುತ್ತಿದೆ. ಈ ಎರಡೂ ವ್ಯವಸ್ಥೆಗಳ ಸಂಯೋಜನೆಯಿಂದ ದಕ್ಷಿಣ ಭಾರತದ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಗದಗ | ನಗರ ಸಭೆಯಲ್ಲಿ ಸಾರ್ವಜನಿಕರಿಗೆ ‘ನೀರಿನ ಬರ’
This video cannot be played in your browser. Open the video directly
ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ, ಉತ್ತರ ಕೇರಳ ಜಿಲ್ಲೆಗಳಲ್ಲಿ ಹಾಗೂ ತಮಿಳುನಾಡಿನ ಉತ್ತರ ಕರಾವಳಿ ಜಿಲ್ಲೆಗಳಲ್ಲಿ 115.6 ಮಿಮೀನಿಂದ 204.4ಮಿಮೀವರೆಗೆ ಅತಿ ಭಾರೀ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಗಂಟೆಗೆ 50-60 ಕಿಮೀ ದೂರ ಗಾಳಿಯ ವೇಗ ತಲುಪುವ ಸಾಧ್ಯತೆಯಿದೆ ಎನ್ನಲಾಗಿದೆ.





