ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವನ್ನು ಆಯ್ಕೆ ಮಾಡುವ ಸಲುವಾಗಿ ಜೂ.27 ರಂದು ಜಿಲ್ಲಾ ಮಟ್ಟದ ಸಮಿತಿಯಿಂದ ನಡೆದ ಸಭೆಯಲ್ಲಿ 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಮಂಗಳೂರು | ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ, ಸುಳ್ಳು ಪ್ರಚಾರ; ಓರ್ವನ ಸೆರೆ
ನೆಲ್ಯಾಡಿ, ಬೆಳ್ಳಾರೆ, ಕೆಯ್ಯೂರು, ಒಳಮೊಗ್ರು, ನರಿಮೊಗ್ರು, ಉಜಿರೆ, ನರಿಕೊಂಬು, ತೆಂಕಮಿಜಾರು, ಪುತ್ತಿಗೆ, ಬೆಳುವಾಯಿ, ಅಡ್ಡೂರು, ಮೂಳೂರು, ತಲಪಾಡಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿರುತ್ತದೆ.
ಸಭೆಯಲ್ಲಿ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಅಡಿಯಲ್ಲಿ ಸೋಲಾರ್ ಅಳವಡಿಸುವಂತೆ ಗ್ರಾಮ ಮಟ್ಟದಲ್ಲಿ ಜನರಿಗೆ ಉತ್ತೇಜನ ನೀಡುವಂತೆ ಸೂಚಿಸಲಾಗಿದೆ. ಸ್ಪರ್ಧೆಯ ಕಾಲಾವಧಿಯು ಜುಲೈ 1 ರಿಂದ ಡಿಸೆಂಬರ್ ಅಂತ್ಯದವರೆಗೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಮಾಹಿತಿ ನೀಡಿದೆ.
