ದ.ಕ | ಹಿಂದೂ ಸಮಾಜದ ಉಳಿವಿಗೆ ಮದ್ಯ ನಿಷೇಧಿಸಿ ರಾಮ ರಾಜ್ಯ ಮಾಡಿ: ಜೆಡಿಯು ಮುಖಂಡ

Date:

Advertisements

ಭಾರತ ದೇಶದಲ್ಲಿ ರಾಮರಾಜ್ಯವಾಗಲು ಹಾಗೂ ಹಿಂದೂ ಸಮಾಜವನ್ನು ಉಳಿಸಲು ದೇಶಾದ್ಯಂತ ಸಂಪೂರ್ಣ ಮದ್ಯ ನಿಷೇಧ ಕಾನೂನು ಕಟ್ಟು ನಿಟ್ಟಾಗಿ ಜಾರಿಯಾಗಬೇಕು. ಸರ್ಕಾರವು ಮದ್ಯ ಮಾರಾಟಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು‌, ಹಿಂದೂ ಸಮಾಜದಲ್ಲಿ ಮದ್ಯಪಾನ ಮಾಡುವವರ ಸಂಖ್ಯೆ ಮಿತಿ ಮೀರಿದೆ ಎಂದು ಜೆಡಿಯು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಪ್ರೀತ್‌ ಕುಮಾರ್ ಪೂಜಾರಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಜನರು ಕುಡಿತದ ದಾಸರಾಗುತ್ತಿದ್ದಾರೆ. ಮದ್ಯಪಾನದ ದರವನ್ನು ಸರ್ಕಾರವು ವಿಪರೀತ ಏರಿಕೆ ಮಾಡಿದ್ದು‌, ಜನಸಾಮಾನ್ಯರು ಕಷ್ಟಪಟ್ಟು ದುಡಿದ ಹಣವನ್ನು ಮದ್ಯಪಾನ ಮಾಡಲು ಬಳಸುತ್ತಿದ್ದಾರೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ದೇಶಾದ್ಯಂತ ಸಂಪೂರ್ಣ ಮದ್ಯ‌ ನಿಷೇಧ ಕಾನೂನು ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಬಳಕೆ: ರೇಣುಕಾಚಾರ್ಯ ಆರೋಪ

Advertisements

“ಮದ್ಯ ಸೇವನೆ ಹಾಗೂ ಮಾರಾಟದಲ್ಲಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡಕ್ಕೆ ಅಗ್ರಸ್ಥಾನವಿದೆ. ಮದ್ಯಪಾನವು ರಾಮರಾಜ್ಯ ಆಗುತ್ತಿರುವ ಹಿಂದೂ ಸಮಾಜವನ್ನು ಸದ್ದಿಲ್ಲದೆ ಸಾಯಿಸುತ್ತಿದೆ. ಕೂಡಲೇ ಮದ್ಯ ನಿಷೇಧ ಕಾನೂನು ಜಾರಿಗೊಳಿಸಬೇಕು” ಎಂದು ಜೆಡಿಯು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಪ್ರೀತ್‌ ಕುಮಾರ್ ಪೂಜಾರಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X