ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಪ್ರಕಟಿಸುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ 2025 ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 20 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವು ಸೆ.5ರ ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನದಲ್ಲಿ ನಡೆಯಲಿದೆ. 2025ನೇ ಸಾಲಿಗೆ ಕಿರಿಯ,ಹಿರಿಯ,ಪ್ರೌಢಶಾಲಾ ವಿಭಾಗಗಳಿಂದ ಏಳು ತಾಲೂಕಿನ 20 ಶಿಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುವುದು ಎಂದು ತಿಳಿಸಿದ್ದಾರೆ.
ಆಯ್ಕೆಯಾದ ಶಿಕ್ಷಕರ ಪಟ್ಟಿ ಇಲ್ಲಿದೆ.



