ದ.ಕ. | ಹೊಂಡ ಗುಂಡಿಗಳಿಗೆ ಬಿದ್ದು ವಾಹನ ಸವಾರರು ಮೃತಪಟ್ಟರು ಜನಪ್ರತಿನಿಧಿಗಳಿಗೆ ಲೆಕ್ಕವಿಲ್ಲ: ಡಿವೈಎಫ್ಐ

Date:

ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಕೂಡಲೇ ಹೊಂಡ ಗುಂಡಿ ಮುಚ್ಚಿ ರಸ್ತೆ ದುರಸ್ತಿಗೊಳಿಸಲು ಒತ್ತಾಯಿಸಿ, ನಾಗರಿಕರು ಮತ್ತು ಆಟೋ ರಿಕ್ಷಾ ಚಾಲಕರು ಡಿವೈಎಫ್ಐ ಬೈಕಂಪಾಡಿ ಘಟಕದ ನೇತೃತ್ವದಲ್ಲಿ ಬೈಕಂಪಾಡಿ ಕ್ರಾಸ್ ಬಳಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು.

- Advertisement -

ಇದನ್ನೂ ಓದಿ: ಮಂಗಳೂರು | ಇಲಾಖಾಧಿಕಾರಿಗಳ ಹರಸಾಹಸ, ದಡ ಸೇರಿದ ಜೋಡಿ ಕಾಡಾನೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಪ್ರತಿಭಟನೆ ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ, ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ನೆಲ ಜಲವನ್ನು ತ್ಯಾಗ ಮಾಡಿದ ಜನರನ್ನೇ ಮೂಲಭೂತ ಸೌಕರ್ಯಕ್ಕಾಗಿ ಹೋರಾಟ ಮಾಡುವ ದುಸ್ಥಿತಿಗೆ ತಂದು ನಿಲ್ಲಿಸಿದೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿ ಮರೆತಿದ್ದಾರೆ. ನಮ್ಮ ಕ್ಷೇತ್ರದ ಶಾಸಕರು ಅಸೆಂಬ್ಲಿ ಅಧಿವೇಶನದಲ್ಲಿ ತನ್ನ ಕ್ಷೇತ್ರದ ಬಗ್ಗೆ ಮಾತನಾಡುತ್ತಿಲ್ಲ. ವಾಹನ ಸವಾರರು ರಸ್ತೆ ಹೊಂಡ ಗುಂಡಿಗೆ ಬಿದ್ದು ಸಾಯುತ್ತಿದ್ದರು ಅವರಿಗೆ ಅದರ ಬಗ್ಗೆ ಚಿಂತೆ ಇಲ್ಲ. ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುವ ಬಡ ರಿಕ್ಷಾ, ಟೆಂಪೋ ಚಾಲಕರ ನೋವುಗಳು ಜನಪ್ರತಿನಿಧಿಗಳಿಗೆ ಅರ್ಥವಾಗುತ್ತಿಲ್ಲ. ಮುಂದಿನ 15 ದಿನದೊಳಗೆ ರಸ್ತೆ ದುರಸ್ತಿ ಆಗದಿದ್ದಲ್ಲಿ ಸಾರ್ವಜನಿಕರನ್ನು ಸಂಘಟಿಸಿ ಕೆಐಎಡಿಬಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿದಾಗ ಪೊಲೀಸರು ರಸ್ತೆ ನಿರ್ಲಕ್ಷ್ಯ ಮಾಡಿದ ಇಲಾಖೆಗಳ ಅಧಿಕಾರಿಗಳ ಮೇಲೆ ಕೇಸು ದಾಖಲಿಸಬೇಕು ಎಂದು ಆಗ್ರಹಿಸಿದರು.

ಡಿವೈಎಫ್ಐ ಸುರತ್ಕಲ್ ವಲಯ ಕಾರ್ಯದರ್ಶಿ ಶ್ರೀನಾಥ್ ಕುಲಾಲ್ ಮಾತನಾಡಿದರು. ಈ ಸಂದರ್ಭದಲ್ಲಿ ಬೈಕಂಪಾಡಿ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ನವೀನ್ ಬೈಕಂಪಾಡಿ, ಪೂವಪ್ಪ ದೇವಾಡಿಗ, ಮೋನಪ್ಪ, ಲತೀಫ್ ಅಂಗರಗುಂಡಿ, ಶಾಫಿ, ಶಬ್ಬೀರ್, ಮುಸ್ತಫಾ ಎಸ್.ಎಂ ಫಾರೂಕ್ ದೇಶ್ ಪ್ರೇಮಿ, ಟೆಂಪೋ ಚಾಲಕರ ಸಂಘದ ನಾಯಕರಾದ ಫೈವ್ ಸ್ಟಾರ್ ಖಾದರ್, ರಹೀಮ್, ಹೈದರ್, ಅಬ್ದುಲ್ ಕಾದರ್, ಬಸ್ ಮಾಲಕರ ಸಂಘದ ಇಚ್ಛಾಲಿ ಎಸ್. ಎಂ,ಡಿವೈಎಫ್ಐ ಮುಖಂಡರಾದ ಬಿ.ಕೆ ಮಕ್ಸೂದ್, ತೌಸೀಫ್ ಅಂಗರಗುಂಡಿ, ಶಕೀಲ್, ನಿಜಾಮ್, ಮುಸ್ತಫಾ, ನವಾಜ್ ಕುಳಾಯಿ, ಇಕ್ಬಾಲ್ ಜೋಕಟ್ಟೆ, ಸಾದಿಕ್ ಮೂಲ್ಕಿ, ಅನ್ಸಾರ್, ಫರಾನ್,ಸೈಫಲ್, ಸಾಬಿತ್,ಜಿಯಾದ್, ನಿಶಾನ್ ಎಂ.ಕೆ, ನಾಸಿರ್, ರಫೀಕ್ ನೌಫಾನ್, ರಾಝಿಕ್, ಎನ್.ಎಫ್.ಸಿ ಕ್ರಿಕೆಟರ್ಸ್ ಪ್ರಮುಖರಾದ  ಸಲೀಮ್, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...