ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದ್ದು ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಶ್ರೀರಂಗಪಟ್ಟಣದ ಟಿಎಂ ಹೊಸೊರು ಗೇಟ್ ಬಳಿ ಈ ಘಟನೆ ನಡೆದಿದೆ.
ಡಿಕೆಶಿ ಅವರು ಬೆಂಗಳೂರಿಗೆ ತೆರಳುತ್ತಿದ್ದಾಗ ಹಿಂದಿನಿಂದ ಬರುತ್ತಿದ್ದ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಇದನ್ನು ಓದಿದ್ದೀರಾ? ಬಿಜೆಪಿ ಸಂಸದರ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ; ಮೂವರ ಸಾವು
ವಾಹನದಲ್ಲಿದ್ದ ಬೆಂಗಳೂರಿನ ದಿನೇಶ್, ಮಹೇಶ್, ಜಯಲಿಂಗು ಮತ್ತು ಕಾರ್ತಿಕ್ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಬೆಂಗಾವಲು ವಾಹನ ಭಾಗಶಃ ಜಖಂಗೊಂಡಿದೆ. ಆದರೆ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
