ದ.ಕ. | ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ; ಒಬ್ಬನ ಬಂಧನ

Date:

ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.

- Advertisement -

ಆರೋಪಿ ಮೂಲತ: ಕೇರಳದ ಎರ್ನಾಕುಲಂ ಮಟ್ಟಂಚೇರಿಯ ಹಾಗೂ ಇದೀಗ ದೇರಳಕಟ್ಟೆಯಲ್ಲಿ ನೆಲೆಸಿರುವ ಮುಹಮ್ಮದ್ ಅರ್ಶದ್ ಖಾನ್(29) ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈತನ ಬಳಿಯಿದ್ದ ರೂ. 10, 85,000 ಮೌಲ್ಯದ ನಿಷೇದಿತ ಮಾದಕ ವಸ್ತು ಎಂಡಿಎಂಎ, ಹೈಡೋವಿಡ್ ಗಾಂಜಾ, ಎಂಡಿಎಂಎ ಮಾತ್ರೆ ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಜತೆಗೆ ಹಲವು ವಸ್ತುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ʼಕೊಂದವರು ಯಾರು?ʼ ಆಂದೋಲನ; ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಸಲ್ಲಿಕೆ

ಆರೋಪಿಯು ಎಂಡಿಎಂಎ ವನ್ನು ಬೆಂಗಳೂರಿನಿಂದ ಖರೀದಿಸಿ ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯು ದೇರಳಕಟ್ಟೆಯ ವಿವಿಧೆಡೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...