ದ.ಕನ್ನಡ | ಡಿ.8ರಂದು ಸಿಪಿಐಎಂ ಬೃಹತ್ ರ‍್ಯಾಲಿ, ಬಹಿರಂಗ ಸಭೆ

Date:

ಅಸಮಾನ ಅಭಿವೃದ್ಧಿಗೆ ಸಾಕ್ಷಿಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಾಮಾನ್ಯರನ್ನು ಬಾಧಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಪರಿಹರಿಸಬೇಕು, ಜನಸಾಮಾನ್ಯರ ಬೇಡಿಕೆಗಳನ್ನು ಗಮನದಲ್ಲಿಟ್ಟು ಅಭಿವೃದ್ದಿಯೋಜನೆಗಳನ್ನು‌ ರೂಪಿಸಬೇಕು ಎಂದು ಆಗ್ರಹಿಸಿ “ಜನಸಾಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆ” ಎಂಬ ಘೋಷಣೆಯಡಿಯಲ್ಲಿ ಡಿ.8ರಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ಹೊರಡಲಿದ್ದು, 11 ಗಂಟೆಗೆ ಸರಿಯಾಗಿ ಕ್ಲಾಕ್ ಟವರ್ ಬಳಿ ಬಹಿರಂಗ ಸಭೆ ನಡೆಯಲಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್‌ ಕಾಟಿಪಳ್ಳ ತಿಳಿಸಿದ್ದಾರೆ.

- Advertisement -

ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ, ಕೈಗಾರಿಕೆಗಳು, ಕೃಷಿ, ಮೀನುಗಾರಿಕೆಗೆ ಸಂಬಂಧಿಸಿ ಸ್ಥಳೀಯ ಜನತೆಯ ಹಿತಾಸಕ್ತಿಗಳನ್ನು ಎತ್ತಿಹಿಡಿಯಬೇಕು. ಜಿಲ್ಲೆಯ ಹೊಸ ತಾಲೂಕುಗಳಿಗೆ ತಾಲೂಕು ಆಸ್ಪತ್ರೆಗಳನ್ನು ಮಂಜೂರು ಮಾಡಬೇಕು. ಕಿದ್ವಾಯಿ, ಜಯದೇವ ಆಸ್ಪತ್ರೆಗಳನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕು. ಆರೋಗ್ಯ ರಂಗದಲ್ಲಿ ಪಿಪಿಪಿ ಮಾದರಿಗೆ ಅವಕಾಶ ನೀಡಬಾರದು. ಜಿಲ್ಲೆಯ ಉದ್ಯಮಗಳಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ಕಡ್ಡಾಯಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಪಡಿಸುವುದು, ಬೇಕಾಬಿಟ್ಟಿ ಟೋಲ್ ಗೇಟ್ ನಿರ್ಮಾಣಕ್ಕೆ ಕಡಿವಾಣ ಹಾಕುವುದು, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುವ ರಾಜ್ಯದ ಅನಿವಾಸಿ ಶ್ರಮಿಕರಿಗೆ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವುದು, ಮಂಗಳೂರು ನಗರ ಸಹಿತ ರಸ್ತೆಗುಂಡಿಗಳನ್ನು ಮುಚ್ಚುವುದು, ಕೆಂಪುಕಲ್ಲು ದರ ಇಳಿಸುವುದು, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವುದು, ಆದಿವಾಸಿ, ಅಲೆಮಾರಿ, ದಲಿತರು ಸೇರಿದಂತೆ ಕಳೆವರ್ಗಗಳ ಹಿತಾಸಕ್ತಿ ಕಾಪಾಡುವುದು, ಬೀಡಿ ನಿರ್ಮಾಣ ವಿಭಾಗ ಸೇರಿದಂತೆ ಅಸಂಘಟಿತ ಕಾರ್ಮಿಕರ ಶೋಷಣೆಗೆ ಕಡಿವಾಣ ಹಾಕುವುದು ಸೇರಿದಂತೆ ಮುಂತಾದ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು.

ಇದನ್ನೂ ಓದಿ: ದಕ್ಷಿಣ ಕನ್ನಡ | ಸರ್ಕಾರ ಅಧಿಕೃತ ಕಸಾಯಿಖಾನೆಗೆ ಅನುಮತಿ ನೀಡಲು ಮುಸ್ಲಿಂ ಮುಖಂಡರ ಒತ್ತಾಯ

ಅಭಿವೃದ್ದಿ ಎಂಬುದು ಸಮಾಜದ ಮೇಲ್ಪದರದಲ್ಲಿರುವ ಜನಗಳಿಗಷ್ಟೇ ಸೀಮಿತವಾಗದೆ ಸಮಸ್ತ ಜನವಿಭಾಗಗಳನ್ನು ಒಳಗೊಳ್ಳುವಂತೆ ಯೋಜನೆಗಳನ್ನು ರೂಪಿಸಬೇಕು ಎಂಬ ಆಗ್ರಹದೊಂದಿಗೆ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.

ಶಿಕ್ಷಣ, ಆರೋಗ್ಯದ ಲಾಬಿಗಳು, ರಿಯಲ್ ಎಸ್ಟೇಟ್ ಮುಂತಾದ ದೊಡ್ಡ ಉದ್ಯಮಿಗಳ ಪರವಾಗಿ ಜಿಲ್ಲೆಯ ಆಳುವ ವರ್ಗ ರೂಪಿಸುತ್ತಿರುವ ಇಂದಿನ ಏಕಪಕ್ಷೀಯ ಅಭಿವೃದ್ಧಿಗೆ ಪರ್ಯಾಯವಾದ ಕಣ್ಣೋಟದೊಂದಿಗೆ, ಜನ ಸಾಮಾನ್ಯರ ಬದುಕು ಉತ್ತಮ ಗೊಳಿಸುವ ಉದ್ದೇಶದೊಂದಿಗೆ ನಡೆಯುತ್ತಿರುವ ಈ ಜನಾಗ್ರಹ ಕಾರ್ಯಕ್ರಮವನ್ನು ಜಿಲ್ಲೆಯ ಜನತೆ ಬೆಂಬಲಿಸಬೇಕು ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...