ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಸದಸ್ಯರು ಕಾಂಗ್ರೆಸ್ ಸೇರಿದರು.
ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಅಧ್ಯಕ್ಷೆ ನೀತಾ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳನ್ನು ಹಾಗೂ ಸಿದ್ಧಾಂತವನ್ನು ಮೆಚ್ಚಿ ನಾವು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೊಬೋ , ಮಾಜಿ ಮೇಯರ್ ಅಶ್ರಫ್, ಮಹಾಬಲ ಮಾರ್ಲ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಕಾರ್ಪೊರೇಟರ್ ತನ್ವೀರ್ ಷಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶುಭೋದಯ ಆಳ್ವಾ, ಮುಖಂಡರಾದ ಯೋಗೀಶ್ ಕುಮಾರ್, ದುರ್ಗಾ ಪ್ರಸಾದ್, ಮೊದಲಾದವರು ಭಾಗವಹಿಸಿದ್ದರು.