ದಕ್ಷಿಣ ಕನ್ನಡ | 23 ಪ್ರಕರಣಗಳ ಆರೋಪಿ ಬಂಧನ

Date:

  • ಅಜರುದ್ದೀನ್ ವಿರುದ್ಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ 23 ಪ್ರಕರಣ ದಾಖಲು
  • 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ಅಝೀಝ್ (45) ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹಲವು ನ್ಯಾಯಾಲಯಗಳಿಂದ ಹೊರಡಿಸಲಾಗಿದ್ದ 23 ವಾರೆಂಟ್‌ಗಳನ್ನು ಎದುರಿಸುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಮಹೇಶ್ ಪ್ರಸಾದ್ ನೇತೃತ್ವದ ತಂಡ ಕೃಷ್ಣಾಪುರ ನಿವಾಸಿ ಅಜರುದ್ದೀನ್ ಯಾನೆ ಅಜರ್ ಯಾನೆ ನಾಥು (29) ಎಂಬಾತನನ್ನು ಬಂಧಿಸಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಅಜರುದ್ದೀನ್ ವಿರುದ್ಧ ಮಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ 16, ದಕ್ಷಿಣ ಕನ್ನಡ ಜಿಲ್ಲೆಯ ಇತರ ತಾಲೂಕುಗಳ ಪೊಲೀಸ್ ಠಾಣೆಗಳಲ್ಲಿ 3 ಮತ್ತು ಉಡುಪಿಯಲ್ಲಿ 4 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣೆಗಳಲ್ಲಿ ತಲಾ 2, ಉಳ್ಳಾಲ 4, ಬರ್ಕೆ, ಕೊಣಾಜೆ ತಲಾ 3, ಮೂಲ್ಕಿ, ಮಂಗಳೂರು ಗ್ರಾಮಾಂತರ, ಬೆಳ್ತಂಗಡಿ, ವಿಟ್ಲ, ಬಂಟ್ವಾಳ ನಗರ, ಕಾಪು, ಮಣಿಪಾಲ, ಮಲ್ಪೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

ಇನ್ನೋರ್ವ ಆರೋಪಿ ಅಬ್ದುಲ್ ಅಝೀಝ್ (45) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ತುಂಬೆ ಗ್ರಾಮದ ನಿವಾಸಿಯಾಗಿರುವ ಈತ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನಗರ, ದಕ್ಷಿಣ ಕನ್ನಡ, ಹಾಸನ ಮತ್ತು ನೆರೆಯ ಕೇರಳದ ಹಲವು ಪೊಲೀಸ್ ಠಾಣೆಗಳಲ್ಲಿ 10 ಪ್ರಕರಣಗಳು ದಾಖಲಾಗಿವೆ.

ಈತನ ವಿರುದ್ಧ ಕೊಣಾಜೆಯಲ್ಲಿ 4, ಉಳ್ಳಾಲದಲ್ಲಿ 3, ಬಂಟ್ವಾಳ ಮತ್ತು ಹಾಸನದ ಅರೇಹಳ್ಳಿಯಲ್ಲಿ ತಲಾ 1 ಹಾಗೂ ಕೇರಳದ ಕುಟ್ಯಾಡಿ ಪೊಲೀಸ್ ಠಾಣೆಯಲ್ಲಿ 1 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕಾಲಮಿತಿಯೊಳಗೆ ರಸ್ತೆ ಗುಂಡಿ ಮುಚ್ಚಲು ಸೂಚನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು...

ರಾಜ್ಯದಲ್ಲಿ ಮೇ 31ರಿಂದ ಮುಂಗಾರು ಮಳೆ ಆರಂಭ

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ವಾತಾವರಣ ತಂಪಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರ...

ಕಲಬುರಗಿ | ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ; ಒಂದೇ ಊರಿನ ಮೂವರು ಯುವಕರು ದುರ್ಮರಣ

ಸಾರಿಗೆ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಮೇಲೆ...

ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ...