ದಕ್ಷಿಣ ಕನ್ನಡ | ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ನಿಂದ ಸಾಮೂಹಿಕ ವಿವಾಹ; ಅರ್ಜಿ ಆಹ್ವಾನ

Date:

Advertisements

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್‌ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ. ಆಗಸ್ಟ್ 23ರಂದು ಬಂಟ್ವಾಳ ತಾಲೂಕಿನ ನೇರಳಕಟ್ಟೆಯಲ್ಲಿರುವ ಜನಪ್ರಿಯ ಗಾರ್ಡನ್‌ ಸಭಾಂಗಣದಲ್ಲಿ ನಡೆಯಲಿರುವ ಸಾಮೂಹಿಕ ವಿವಾಹಕ್ಕೆ ಆಸಕ್ತ ವಧುವಿನ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, ಮೂರು ಪವನ್‌ ಚಿನ್ನಾಭರಣ ಹಾಗೂ ಮದುವೆಯ ಖರ್ಚನ್ನು ಟ್ರಸ್ಟ್‌ ಭರಿಸಲಿದೆ. ಅನಾಥ, ಅಂಗವಿಕಲ, ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆದ್ಯತೆ ನೀಡಲಾಗುವುದು ಎಂದು ಟ್ರಸ್ಟ್‌ ತಿಳಿಸಿದೆ.

ಇದನ್ನು ಓದಿದ್ದೀರಾ? ಐಪಿಎಲ್ | ಅಂಕಪಟ್ಟಿಯಲ್ಲಿ ಆರ್‌ಸಿಬಿಗೆ ಮೊದಲ ಸ್ಥಾನ: ಪ್ಲೇ-ಆಫ್‌ಗೇರಲು ಯಾವ ತಂಡಕ್ಕೆ ಎಷ್ಟು ಶೇಕಡಾ ಅವಕಾಶ?

Advertisements

ಆಸಕ್ತರು ನಿಗದಿತ ಅರ್ಜಿ ನಮೂನೆ ಪಡೆಯಲು ಹಾಗೂ ಅರ್ಜಿ ಸಲ್ಲಿಸಲು ಜೂನ್ 30, 2025ರ ಒಳಗಾಗಿ ಕೆ.ಎಸ್.‌ ಅಬೂಬಕರ್‌ (ಮೊ.ಸಂ: 9845662169) ಪಿ. ಮುಹಮ್ಮದ್ (ಮೊ.ಸಂ: 9743266456) ಅಥವಾ ಬಿ.ಎ. ಶಕೂರ್ (ಮೊ.ಸಂ: 9448216149) ಇವರನ್ನು ಸಂಪರ್ಕಿಸಬಹುದು ಎಂದು ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉಮರ್‌ ಯು.ಹೆಚ್.‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X