ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಂಟು ಮಂದಿ ಸದಸ್ಯರ ವಿರುದ್ಧ ದೂರು ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ ಸಜಿಪ ಮುನ್ನೂರು ಗ್ರಾಮ ಪಂಚಾಯತಿಯ ಪಿಡಿಒ ಲಕ್ಷ್ಮಣ್ ಅವರು ಅದೇ ಗ್ರಾಮ ಪಂಚಾಯತಿ ಸದಸ್ಯ ಅಬೂಬಕ್ಕರ್ ಸಿದ್ದಿಕ್, ಜಮಾಲುದ್ದೀನ್, ಫಾತಿಮಾ ಸೌನ್, ಫೌಝಿಯಾ, ಸಬೀನಾ, ರಝಿಯಾ, ಸಾಜಿದ್, ವಹಿದಾ ಬಾನು ವಿರುದ್ಧ ದೂರು ನೀಡಿದ್ದಾರೆ.
ಸಜಿಪ ಮುನ್ನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಅವರು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿ ಇಲ್ಲಿನ ಎಸ್‌ಡಿಡಿಪಿಐ ಬೆಂಬಲಿತ ಎಂಟು ಮಂದಿ ಸದಸ್ಯರುಗಳು ಗ್ರಾಮ ಪಂಚಾಯಿತಿಗೆ ಯಾವುದೇ ಮುನ್ನೆಚ್ಚರಿಕೆ ನೀಡದೆ ಸೋಮವಾರ ಮುತ್ತಿಗೆ ಹಾಕಿದ್ದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಂಧನೂರು ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ
ಪಂಚಾಯಿತಿ ಸಿಬ್ಬಂದಿಗಳಾದ ಮೀನಾಕ್ಷಿ, ಮಹಮ್ಮದ್ ಹಾರಿಶ್, ನಳಿನಿ, ಸುಮನಾರವರನ್ನು ಕಚೇರಿಯೊಳಗೆ ಹೋಗದಂತೆ ತಡೆ ಹಿಡಿದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಕಚೇರಿಯ ಬೀಗದ ಕೀಯನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ ದೂರಿನಲ್ಲಿ ತಿಳಿಸಿದ್ದಾರೆ.