ದಕ್ಷಿಣ ಕನ್ನಡ | ಜಾನುವಾರುಗಳ ಪಶು ಆಧಾರ್‌ ನೋಂದಣಿಗೆ ಸಿದ್ಧತೆ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.5 ಲಕ್ಷ ಜಾನುವಾರುಗಳನ್ನು ಪಶು ಆಧಾರ್ ನೋಂದಣಿಗೆ ಒಳಪಡಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ವಿಜ್ಞಾನಗಳ ಇಲಾಖೆ ಸಜ್ಜಾಗಿದೆ.

ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ (ಎನ್‌ಡಿಡಿಬಿ) ಮಾಹಿತಿ ಜಾಲದ ಅಡಿಯಲ್ಲಿ ಜಿಲ್ಲೆಯ ಪ್ರತಿ ಸಾಕು ಜಾನುವಾರುಗಳಿಗೆ ಬಯೋಮೆಟ್ರಿಕ್ ವಿವರಗಳೊಂದಿಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲಾಗುವುದು. ಈ ದತ್ತಾಂಶದಿಂದ ಜಿಲ್ಲೆಯ ಜಾನುವಾರುಗಳ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು, ವಿಶೇಷವಾಗಿ ರೋಗಗಳನ್ನು ನಿಭಾಯಿಸಲು ಸಹಾಯವಾಗುತ್ತದೆ” ಎಂದು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ವಿಜ್ಞಾನಗಳ ಉಪನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

“ಜಿಲ್ಲೆಯಲ್ಲಿ 2.5 ಲಕ್ಷಕ್ಕೂ ಹೆಚ್ಚು ಜಾನುವಾರುಗಳ ಮೂಗಿನ ಮಾದರಿಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭಿಸಲು ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ. ಜಾನುವಾರುಗಳಿಗೆ ಈ ಮೊದಲು 12 ಅಂಕಿಗಳ ಗುರುತಿನ ಸಂಖ್ಯೆಗಳೊಂದಿಗೆ ಕಿವಿ ಟ್ಯಾಗ್ ನೀಡಲಾಗುತ್ತಿತ್ತು. ಇದರಿಂದ ಕಿವಿಗಳಲ್ಲಿ ಗಾಯಗಳು, ಸೋಂಕುಗಳು ಮತ್ತು ಅಲರ್ಜಿಗಳಿಗೆ ಕಾರಣವಾಗಿದೆ. ಕಿವಿ ಟ್ಯಾಗ್‌ಗಳು ಬಳ್ಳಿಗಳು ಮತ್ತು ಬೇಲಿಗಳಿಗೆ ಸಿಕ್ಕಿಕೊಂಡಾಗ ಹಸುಗಳು ಗಾಯಗೊಂಡ ಉದಾಹರಣೆಗಳಿವೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜಾನುವಾರುಗಳ ಕಿವಿಯೋಲೆಗಳನ್ನು ಬದಲಿಸಿ, ದೇಶೀಯ ಜಾನುವಾರುಗಳ ಮೂಗಿನ ಮಾದರಿ ಗುರುತಿಸುವಿಕೆಯನ್ನು ಪರಿಚಯಿಸಲು ಸರ್ಕಾರ ನಿರ್ಧರಿಸಿದೆ. ಜಾನುವಾರುಗಳನ್ನು ಗುರುತಿಸುವ ಉದ್ದೇಶದಿಂದ ಮೂಗಿನ ಮಾದರಿಯನ್ನು ಸ್ಕ್ಯಾನ್ ಮಾಡಲಾಗುತ್ತದೆ. ಇದನ್ನು ಬಯೋಮೆಟ್ರಿಕ್ ಡೇಟಾವಾಗಿ ಬಳಸಲಾಗುತ್ತದೆ” ಎಂದರು.

“ಪ್ರತಿ ಜಾನುವಾರುಗಳು ತನ್ನದೇ ಆದ ವಿಶಿಷ್ಟ ಮೂಗಿನ ಮಾದರಿಯನ್ನು ಹೊಂದಿದ್ದು, ಉಳಿದ ಪ್ರಾಣಿಗಳಿಗಿಂತ ಭಿನ್ನವಾಗಿರುತ್ತವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಮನರೇಗಾ ಕೂಲಿಕಾರರಿಗೆ ಶ್ರಮಿಕ ಆರೋಗ್ಯ ಅಭಿಯಾನ ಆಯೋಜನೆ

“ಜಿಲ್ಲೆಯ ಎಲ್ಲ ಜಾನುವಾರುಗಳ ಮೂಗಿನ ಮಾದರಿ ಸಂಗ್ರಹಕ್ಕೆ ಸಿದ್ಧರಾಗುವಂತೆ ಇಲಾಖೆ ಸಿಬ್ಬಂದಿಗೆ ಸರ್ಕಾರ ಸುತ್ತೋಲೆ ಕಳುಹಿಸಿದೆ. ಈ ಉದ್ದೇಶಕ್ಕಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಸಾಫ್ಟ್‌ವೇರ್ ಅಪ್ಲಿಕೇಶನ್‌ಗಳನ್ನು ಒದಗಿಸುತ್ತದೆ” ಎಂದು ತಿಳಿಸಿದ್ದಾರೆ.

20ನೇ ಜಾನುವಾರು ಗಣತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 65,997 ಸ್ಥಳೀಯ ಹಾಗೂ 1,84,572 ಮಿಶ್ರತಳಿ ಸೇರಿದಂತೆ ಒಟ್ಟು 2,50,569 ಜಾನುವಾರುಗಳಿವೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...