ದಕ್ಷಿಣ ಕನ್ನಡ | ಆ್ಯಪ್ ಆಧಾರಿತ ಸಮೀಕ್ಷೆ ಕೈಬಿಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

Date:

ಮಕ್ಕಳು ಮತ್ತು ಗರ್ಭಿಣಿಯರ ದತ್ತಾಂಶ ಸಂಗ್ರಹಿಸಲು ನಡೆಸುತ್ತಿರುವ ಮೊಬೈಲ್ ಆ್ಯಪ್ ಆಧಾರಿತ ‘ಹೆಲ್ತ್ ಅಂಡ್ ನ್ಯೂಟ್ರಿಷನ್ ಸರ್ವೇ’ (ಎಚ್ಎನ್ಎಸ್)ಯನ್ನು ಕೈಬಿಡುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಒತ್ತಾಯಿಸಿದೆ.

- Advertisement -

ಮಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಘದ ಕಾರ್ಯಕರ್ತತೆ ಭೇಟಿ ಮಾಡಿ, ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಶೋಭಾ, “ಪಿಎಚ್‌ಸಿ ಮತ್ತು ಸಿಎಚ್‌ಸಿ ಅಧಿಕಾರಿಗಳ ಸಮನ್ವಯದೊಂದಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಒಗ್ಗೂಡಿ ಸಮೀಕ್ಷೆ ನಡೆಸಬೇಕಾಗಿದೆ. ಆದರೆ, ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸದ ಕಾರಣ ಆಶಾ ಕಾರ್ಯಕರ್ತೆಯರ ಮೇಲಿನ ಹೊರೆ ಹೆಚ್ಚಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಆಶಾ ಕಾರ್ಯಕರ್ತೆಯರು ಹೊಸದಾಗಿ ಸೇರ್ಪಡೆಯಾಗಿರುವ ಎಚ್ಎನ್ಎಸ್ ಜೊತೆಗೆ ಕುಷ್ಠರೋಗ, ಲಾರ್ವಾ ಮತ್ತು ರೋಗನಿರೋಧಕತೆಯ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಒಂದು ಮನೆಯನ್ನು ಕವರ್ ಮಾಡಲು ಕನಿಷ್ಠ 30 ನಿಮಿಷಗಳನ್ನು ತೆಗೆದುಕೊಳ್ಳುವ ಸಮೀಕ್ಷೆಯ ಸಮಯದಲ್ಲಿ ಆಶಾ ಕಾರ್ಯಕರ್ತರು ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಅನೇಕ ಆಶಾ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್‌ಗಳ ಬಳಕೆಯ ಪರಿಚಯವಿಲ್ಲ. ಹಾಗಾಗಿ ಡೇಟಾವನ್ನು ಅಪ್‌ಲೋಡ್ ಮಾಡಲು ಕಷ್ಟಪಡುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಸರ್ಕಾರದ ಶಿಫಾರಸ್ಸಿನಂತೆ ವಿದ್ಯುತ್ ದರ ಹೆಚ್ಚಳವಾಗಿದೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

“ಇಂಟರ್ನೆಟ್ ಡೇಟಾ ಪ್ಯಾಕ್‌ಗಳನ್ನು ಖರೀದಿಸಲು ಆಶಾ ಕಾರ್ಯಕರ್ತೆಯರಿಗೆ ಯಾವುದೇ ಪ್ರತ್ಯೇಕ ಭತ್ಯೆ ನೀಡುವುದಿಲ್ಲ. ಅಲ್ಲದೆ, ರೋಗಿಗಳು ಮತ್ತು ವೈದ್ಯರ ನಡುವೆ ಇ-ಸಂಜೀವಿನಿ ಟೆಲಿ ಸಮಾಲೋಚನೆಗೆ ಅನುಕೂಲವಾಗುವಂತೆ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕಾರ್ಯವನ್ನೂ ನೀಡಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...