ದಕ್ಷಿಣ ಕನ್ನಡ | ಕಾಲೇಜು ಯುವತಿಗೆ ಚೂರಿ ಇರಿತ; ಯುವಕ ಪೊಲೀಸ್ ವಶಕ್ಕೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ಮಂಗಳವಾರ ನಡೆದಿದೆ.

ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ಪುತ್ತೂರು ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಚೂರಿ ಇರಿದ ಶಾಲಾ ವಿದ್ಯಾರ್ಥಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಚೂರಿ ಇರಿಯಲಾಗಿದೆ ಎಂಬ ವಿಚಾರ ಇನ್ನಷ್ಟೇ ತಿಳಿದುಬರಬೇಕಿದೆ.

ಚೂರಿ ಇರಿತಕ್ಕೆ ಯತ್ನಿಸಿದ ವಿದ್ಯಾರ್ಥಿಯನ್ನು ಶ್ರೀಜಿತ್ ಎಂದು ಗುರತಿಸಲಾಗಿದ್ದು, ಗಾಯಗೊಂಡ ವಿದ್ಯಾರ್ಥಿನಿ ಮುಸ್ಲಿಂ ಸಮುದಾಯವರೆಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಯ ಮುಂದೆ ಜನ ಜಮಾಯಿಸಿದ್ದಾರೆ.

Advertisements
WhatsApp Image 2024 08 20 at 2.38.30 PM

ವಿದ್ಯಾರ್ಥಿನಿಯ ಕೈಯಲ್ಲಿ ರಕ್ತ ಬರುವುದನ್ನು ಗಮನಿಸಿದ ಕಾಲೇಜಿನ ಪ್ರಾಂಶುಪಾಲ ಕೈಗೆ ಗ್ಲಾಸು ಬಿದ್ದು ಗಾಯಗೊಂಡಿದೆ ಎಂದು ತಪ್ಪು ಮಾಹಿತಿ ನೀಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲು ಕಳುಹಿಸಿ ಕೊಟ್ಟಿದ್ದಾರೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿರುವ ವಿಡಿಯೋದಲ್ಲಿ ಮುಸ್ಲಿಂ ವಿದ್ಯಾರ್ಥಿನಿ ಹೇಳಿದ್ದಾಳೆ.

ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಆಂಚೆ ಕಚೇರಿಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಪುತ್ತೂರಿನ ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಮುಂಭಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎರಡು ಸಮುದಾಯದ ಯುವಕರು ಆಸ್ಫತ್ರೆ ಮುಂಭಾಗ ಜಮಾಯಿಸಿದ್ದಾರೆ.

ಇದೀಗ ನೈಜ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸುಳ್ಳು ಹೇಳಿ, ಆಸ್ಪತ್ರೆಗೆ ಕಳುಹಿಸಿರುವ ಪ್ರಾಂಶುಪಾಲನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X