ದಕ್ಷಿಣ ಕನ್ನಡ | ಬಿಪರ್‌ಜಾಯ್ ಚಂಡಮಾರುತ; ಅರಬ್ಬಿ ಸಮುದ್ರ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

Date:

ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಬುಧವಾರ (ಜೂ. 7) ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧಿಸಿದ್ದು, ಹೋಂಗಾರ್ಡ್‌ಗಳು ವಾಪಸ್‌ ಕಳುಹಿಸುತ್ತಿದ್ದಾರೆ‌.

ಬುಧವಾರ ನಸುಕಿನಿಂದ ಚಂಡಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದೆ. ಬೃಹತ್ ಗಾತ್ರದ ಅಲೆಗಳು ಸಮುದ್ರದ ಅಂಚಿಗೆ, ಬಂಡೆ ಕಲ್ಲುಗಳಿಗೆ ಬಹುವೇಗವಾಗಿ ಅಪ್ಪಳಿಸುತ್ತಿವೆ. ಉಳ್ಳಾಲದ ಕೋಟೆಪುರ, ಕೋಡಿ, ಮೊಗವೀರಪಟ್ನ, ಕೈಕೋ, ಹಿಲೆರಿಯಾನಗರ, ಸುಭಾಷನಗರ, ಕೈಕೊ, ಸಮ್ಮರ್ ಸ್ಯಾಂಡ್, ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಸಮುದ್ರ ತೀರದ ಜನರಿಗೆ ಸ್ಥಳೀಯ ಆಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ʼಬಿಪರ್‌ಜಾಯ್ʼ ಚಂಡಮಾರುತ ಆರಂಭ; ರಾಜ್ಯದಲ್ಲಿ ಮುಂಗಾರು ವಿಳಂಬ

ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಠಾಣಾ ಪೊಲೀಸರು, ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿದ್ದು, ಸಮುದ್ರ ತೀರಕ್ಕೆ ಬರುವ ಪ್ರವಾಸಿಗರನ್ನು ವಾಪಸ್‌ ಕಳುಹಿಸಲಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿ ರೂಪುಗೊಳ್ಳುತ್ತಿರುವ ಬಿಪರ್‌ಜಾಯ್ ಚಂಡಮಾರುತ, ಉತ್ತರ ದಿಕ್ಕಿನತ್ತ ಚಲಿಸಿದರೆ ಗೋವಾ, ಮುಂಬೈ ಕರಾವಳಿಗೆ ಅಪ್ಪಳಿಸಲಿದೆ. ಜತೆಯಲ್ಲೇ ಕೇರಳದಿಂದ ಮಹಾರಾಷ್ಟ್ರದ ಸಾಗರ ತೀರದ ಉದ್ದಕ್ಕೂ ಭಾರೀ ಮಳೆ ಆಗಲಿದೆ. ಕರ್ನಾಟಕದ ಕರಾವಳಿಯಲ್ಲಿ ಜೂನ್ 8ರಿಂದ ಜೂನ್ 10ರವರೆಗೆ ಪ್ರಕ್ಷುಬ್ಧ ವಾತಾವರಣ ಇರಲಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...