ದಕ್ಷಿಣ ಕನ್ನಡ | ಬಂಟ ಬ್ರಿಗೇಡ್ ಹೆಸರಲ್ಲಿ ನಕಲಿ ಪತ್ರ: ಬಿಜೆಪಿ ದೂರು

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಬೆಂಬಲ ನೀಡುವಂತೆ ಬಂಟ ಬ್ರಿಗೇಡ್ ಹೆಸರಿನಲ್ಲಿ ನಕಲಿ ಪತ್ರ ಹರಿಯಬಿಡಲಾಗಿದೆ ಎಂದು ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.

ಬಿಜೆಪಿ ಕಾನೂನು ಪ್ರಕೋಷ್ಠದ ಸಹ ಸಂಚಾಲಕ ದೇವಿ ಪ್ರಸಾದ್ ಎ ಸಾಮಾನಿ ಅವರು ಈ ಬಗ್ಗೆ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ಬಂಟ ಬ್ರಿಗೇಡ್ ಎಂಬ ಹೆಸರಿನ ಯಾವುದೇ ಸಂಘಟನೆ ಇರುವುದಿಲ್ಲ ಹಾಗೂ ಅಂತಹ ಸಂಘಟನೆಯ ಯಾವುದೇ ಕಾರ್ಯಚಟುವಟಿಕೆಗಳು ನಡೆದಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ನಕಲಿ ಪತ್ರದ ಮೂಲಕ ಕಾಂಗ್ರೆಸ್ ಅಭ್ಯರ್ಥಿಯು ದುರ್ಲಾಭ ಪಡೆಯುತ್ತಿದ್ದಾರೆಂದು ದೂರುದಾರರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ

“ಜಾತಿ ಜಾತಿಗಳ ನಡುವೆ ದ್ವೇಷ ಉಂಟು ಮಾಡಲು ಈ ರೀತಿಯ ಪತ್ರ ಸೃಷ್ಟಿಸಲಾಗಿದೆ” ಎಂದು ದೂರಿನಲ್ಲಿ ತಿಳಿಸಿದೆ.

ಈ ನಕಲಿ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಬಗ್ಗೆ ಕೂಡಲೇ ಸೂಕ್ತ ಕ್ರಮ ಜರಗಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತರಗತಿವಾರು ಲಭ್ಯವಿರದ ಪಠ್ಯಪುಸ್ತಕ ಒದಗಿಸುವಂತೆ ದಸಂಸ ಆಗ್ರಹ

ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ತರಗತಿವಾರು ಲಭ್ಯವಿರದ ಪಠ್ಯಪುಸ್ತಕಗಳನ್ನು ಕೂಡಲೇ ವಿದ್ಯಾರ್ಥಿಗಳಿಗೆ...

ದರ್ಶನ್ ಬಂಧನ | ಪೊಲೀಸರ ಪ್ರಾಮಾಣಿಕ ತನಿಖೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ಘಟನೆ ಬೆಳಕಿಗೆ: ದಯಾನಂದ

“ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಸಿಪಿ...

ಗದಗ | ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಆಚರಣೆ

ಬಕ್ರೀದ್ ಹಬ್ಬದಲ್ಲಿ ಸಹೋದರತೆ, ಏಕತೆಯ ಸಂದೇಶವನ್ನು ಪಾಲಿಸುವ ಮೂಲಕ ಅಲ್ಲಾಹುವಿನ ಪ್ರೀತಿಗೆ...

ನಟ ದರ್ಶನ್ ಫಾರ್ಮ್‌ ಹೌಸ್‌ನ ಮ್ಯಾನೇಜರ್‌ ಆತ್ಮಹತ್ಯೆ; ಡೆತ್ ನೋಟ್ ಪತ್ತೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 13...