ಕತ್ತಿ, ತಲವಾರುಗಳ ಬಗ್ಗೆ ಮಾತನಾಡುವವರು ಬಿಜೆಪಿಗರು: ಮಾಜಿ ಸಚಿವ ರಮಾನಾಥ ರೈ

Date:

ಕತ್ತಿ, ತಲವಾರುಗಳ ಬಗ್ಗೆ ಮಾತನಾಡುವವರು ಬಿಜೆಪಿಗರು. ಕಾಂಗ್ರೆಸ್‌ನವರು ಮಾರಾಕಾಸ್ತ್ರಗಳ ಬಗ್ಗೆ ಮಾತನಾಡುವುದಿಲ್ಲ. ಕೋಮು ದ್ವೇಷದಿಂದ ನಡೆದಿರುವ ಹತ್ಯೆಗಳಲ್ಲಿ ಕಾಂಗ್ರೆಸ್‌ನ ಒಬ್ಬನೇ ಒಬ್ಬ ಕಾರ್ಯಕರ್ತನೂ ಭಾಗಿಯಾಗಿಲ್ಲ. ಇಂತಹ ಹತ್ಯೆಗಳಲ್ಲಿ ಭಾಗಿಯಾಗುವವರು ಬಿಜೆಪಿ ಕಾರ್ಯಕರ್ತರು. ಕೋಮು ಹತ್ಯೆಗಳ ಹಿಂದಿರುವ, ಭಾಷಣ ಮಾಡುವ ಪಿತೂರಿದಾರರಿಗೆ ಶಿಕ್ಷೆಯಾಗಿಲ್ಲ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಬಿ ರಮಾನಾಥ ರೈ ಆರೋಪಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. “ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಆರಂಭವಾಗಿ ಇನ್ನೂ ಎರಡು ತಿಂಗಳೂ ಕಳೆದಿಲ್ಲ. ಆಗಲೇ, ಬಿಜೆಪಿ ನಾಯಕರು ಕಾನೂನು-ಸುವ್ಯವಸ್ಥೆಯ ಬಗ್ಗೆ ಮಾತನಾಡುತ್ತಿದ್ದಾರೆ. ‘ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸರಿಯಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆಗಳು ಹೆಚ್ಚಾಗುತ್ತವೆ’ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಲು ಶುರುಮಾಡಿದ್ದಾರೆ. ಹತ್ಯೆಗಳಲ್ಲಿ ಭಾಗಿಯಾಗುವವರು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

“ಪ್ರಚೋದನಕಾರಿ ಭಾಷಣ ಮಾಡಿರುವುದು ಯಾರು? ಯಾವ ಪಕ್ಷ ಧರ್ಮ, ಕೋಮು ದ್ವೇಷದ ರಾಜಕೀಯ ಮಾಡುತ್ತಿದೆ ಎನ್ನುವುದು ಕರಾವಳಿ ಜನರಿಗೆ ತಿಳಿದಿದೆ. ಕರಾವಳಿಯಲ್ಲಿ ಈ ಹಿಂದೆ ನಡೆದಿರುವ ಮತೀಯ ದ್ವೇಷದ ಹತ್ಯೆ ಪ್ರಕರಣಗಳಲ್ಲಿ ಯಾವೊಬ್ಬ ಕಾಂಗ್ರೆಸ್‌ ಕಾರ್ಯಕರ್ತ ಭಾಗಿಯಾಗಿಲ್ಲ. ಆದರೆ, ಬಿಜೆಪಿ ಹಾಗೂ ಬಿಜೆಪಿ ಬೆಂಬಲಿತ ಮತೀಯ ಸಂಘಟನೆಗಳ ಕಾರ್ಯಕರ್ತರು ಇಂತಹ ಹತ್ಯೆಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿಗರು ಆರೋಪ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದುದ್ದಕ್ಕೂ ಯಾವುದೇ ಸಂದರ್ಭದಲ್ಲಿ ಹಿಂಸೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಮಾತನಾಡಿಲ್ಲ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಬಿಜೆಪಿಗರು ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ ವಿರುದ್ಧ ಆಧಾರ ರಹಿತ ಆರೋಪ-ಅಪಪ್ರಚಾರ ಮಾಡುತ್ತಾರೆ. ಜನರಲ್ಲಿ ಭ್ರಮೆ ಹುಟ್ಟಿಸುತ್ತಿತ್ತಾರೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ?: ಪ್ರತಿಪಕ್ಷಗಳಿಗೆ ಸ್ವಂತ ಬಲವಿಲ್ಲ, ಹೀಗಾಗಿ ಮೋದಿ ಸೋಲಿಸಲು ಒಂದಾಗುತ್ತಿವೆ: ಬೊಮ್ಮಾಯಿ ಟೀಕೆ

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ಕೋಮು ಹತ್ಯೆಗಳಾದ ಹರೀಶ್ ಪೂಜಾರಿ, ವಿನಾಯಕ ಬಾಳಿಗ, ಜಲೀಲ್ ಕೊರೋಪಾಡಿ, ದೀಪಕ್, ಪ್ರವೀಣ್ ನೆಟ್ಟಾರ್, ಫಾಝಿಲ್, ಮಸೂದ್ ಸೇರಿದಂತೆ ಎಲ್ಲ ಪ್ರಕಣಗಳನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಗೆ ಆದೇಶಿಸಬೇಕು. ಈ ಹತ್ಯೆಗಳಿಗೆ ಪಿತೂರಿ ರೂಪಿಸಿದವರು, ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಶಿಕ್ಷೆಯಾಗಬೇಕು. ಆಗ ಮಾತ್ರ, ಕರಾವಳಿಯಲ್ಲಿ ಶಾಂತಿ ನೆಲೆಸಲು ಸಾಧ್ಯ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕಾಂಗ್ರೆಸ್ ಪದಾಧಿಕಾರಿ ಶಾಹುಲ್ ಹಮೀದ್, ಸುರೇಂದ್ರ ಕಂಬ್ಳಿ, ಬಿ ಎಲ್ ಪಿ ಪದ್ಮನಾಭ ಕೋಟ್ಯಾನ್, ಜಯಶೀಲಾ ಅಡ್ಯಂತಾಯ, ಕುಮಾರಿ ಅಪ್ಪಿ, ಗಣೇಶ್ ಪೂಜಾರಿ, ಶಬೀರ್ ಸಿದ್ಧ ಕಟ್ಟೆ, ಶುಭೋದಯ ಆಳ್ವಾ ಉಪಸ್ಥಿತರಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ ಶಾಲೆಗಳನ್ನು ಖಾಸಗಿಯವರೊಂದಿಗೆ ಜೋಡಿಸುವ ಯೋಜನೆಗೆ ಎಸ್‌ಎಫ್‌ಐ ತೀವ್ರ ವಿರೋಧ

ರಾಜ್ಯದ 2 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ...

ಯಾದಗಿರಿ | ದೋರನಹಳ್ಳಿ ಪಟ್ಟಣ ಪಂಚಾಯಿತಿಗೆ ಅನುದಾನ ಬಿಡುಗಡೆಗೆ ಆಗ್ರಹ: ನಮ್ಮ ಕರ್ನಾಟಕ ಸೇನೆ ಮನವಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ...

ಯಾದಗಿರಿ | ಗೋಡೆಗೆ ಕಾರು ಡಿಕ್ಕಿ, ನಾಲ್ವರು ಯುವಕರು ಸ್ಥಳದಲ್ಲೇ ಸಾವು!

ನಿರ್ಮಾಣ ಹಂತದ ಚೆನ್ನೈ- ಸೂರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಗದಗ | ಸರ್ಕಾರಿ ಕನ್ನಡ ಶಾಲೆಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ನೀಡಲು ನಿರ್ಧಾರ; ಎಸ್ಎಫ್ಐ ಖಂಡನೆ

"ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವೈಯಕ್ತಿಕ ಕೊಡುಗೆದಾರರ (Individual CSR) ಸಭೆಯಲ್ಲಿ...