ದಕ್ಷಿಣ ಕನ್ನಡ | ನಿಯಂತ್ರಣ ತಪ್ಪಿ ಸರ್ಕಲ್‌ಗೆ ಡಿಕ್ಕಿ ಹೊಡೆದ ಕಾರು; ಮೂವರು ಸಾವು

Date:

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸರ್ಕಲ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ನಲ್ಲಿ ಶನಿವಾರ ನಡೆದಿದೆ.

- Advertisement -

ಮೃತರನ್ನು ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ (23) ಎಂದು ಗುರುತಿಸಲಾಗಿದೆ. ಶನಿವಾರ ಮುಂಜಾನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ KA 02 AE 6146 ನೊಂದಣಿ ಸಂಖ್ಯೆಯ ಇನ್ನೋವಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳ ಬಿಸಿ ರೋಡ್ ಬಳಿ, ನಾರಾಯಣ ಗುರು ವೃತ್ತಕ್ಕೆ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳಾದ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಸೇರಿದಂತೆ ಉಳಿದ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಇದನ್ನೂ ಓದಿ: ದಕ್ಷಿಣ ಕನ್ನಡ | ಎಸ್‌ಐಒ ವತಿಯಿಂದ SIR ಕುರಿತು ಚರ್ಚಾ ಸಮಾವೇಶ

ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಂಬಂಧಿಕರಾಗಿದ್ದು, ಪ್ರಕರಣದ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ:151/25, ಕಲಂ: 281,125A, 106 BNS ರಂತೆ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...