ದ.ಕ | ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು; ಸಮಯ ಪ್ರಜ್ಞೆ ಮೆರೆದ ಬಸ್‌ ಚಾಲಕ, ನಿರ್ವಾಹಕ

Date:

ಖಾಸಗಿ‌ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ ತೋರಿದ್ದಾರೆ.

- Advertisement -

ಮಂಗಳೂರಿನಲ್ಲಿ ರೂಟ್ ನಂ.13 ಎಫ್‌ನ ಕೃಷ್ಣ ಪ್ರಸಾದ್ ಬಸ್ ಕೂಳೂರು ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತದ ಮುನ್ಸೂಚನೆ ದೊರಕಿತ್ತು. ಈ ವೇಳೆ ವಿಷಯದ ಗಂಭೀರತೆ ಅರಿತ ಬಸ್ ಚಾಲಕ ಹಾಗೂ ನಿರ್ವಾಹಕರಾದ ಗಜೇಂದ್ರ ಕುಂದರ್, ಮಹೇಶ್ ಪೂಜಾರಿ ಹಾಗೂ ಸುರೇಶ್ ಅವರು ಇತರ ಪ್ರಯಾಣಿಕರೊಂದಿಗೆ ಬಸ್ಸನ್ನು ಆ್ಯಂಬುಲೆನ್ಸ್ ಮಾದರಿಯಲ್ಲಿ ಸೈರನ್ ಹಾಕಿಕೊಂಡು 6 ಕಿಮೀ ದೂರವನ್ನು 6 ನಿಮಿಷದಲ್ಲಿ ಕ್ರಮಿಸಿ ವಿದ್ಯಾರ್ಥಿನಿಯನ್ನು ನಗರದ ಕಂಕನಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ...

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿರವಾರ ತಹಶೀಲ್ದಾರ್ ಕಚೇರಿಗೆ ತಾಡಪತ್ರಿ ಮೇಲ್ಛಾವಣಿ

ವಿದ್ಯಾರ್ಥಿನಿಯನ್ನು ಕೂಡಲೇ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ರೀತಿ ವಿದ್ಯಾರ್ಥಿನಿಯನ್ನು ಅಪಾಯದಿಂದ ಪಾರು ಮಾಡಿರುವ ಬಸ್ ಚಾಲಕ, ನಿರ್ವಾಹಕರ ಮಾನವೀಯ ಹಾಗೂ ಸಮಯ ಪ್ರಜ್ಞೆಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಚಾಲಕ ಹಾಗೂ ನಿರ್ವಾಹಕರ ಕಾಳಜಿ ಬಗ್ಗೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾಫರ್ ಅಹ್ಮದ್ ಮೇಲೆ ಮಾರಣಾಂತಿಕ ಹಲ್ಲೆ: ಆರೋಪ

ಕಾಂಗ್ರೆಸ್‌ ಅಲ್ಪಸಂಖ್ಯಾತರ ವಿಭಾಗದ ನಗರ ಘಟಕದ ಅಧ್ಯಕ್ಷ ಜಾಫರ್ ಅಹ್ಮದ್ ಅವರ...

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ ಕುತ್ತು, ರೈತರ ಬದುಕಿಗೆ ಹೊಡೆತ

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ...

ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಮೆರವಣಿಗೆ: 3 ಸಾವಿರಕ್ಕೂ ಅಧಿಕ ಕ್ರೈಸ್ತ ವಿಶ್ವಾಸಿಗಳು ಭಾಗಿ

ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವತಿಯಿಂದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಮೆರವಣಿಗೆ...

ತಾಳಿಕೋಟೆ |ಟಿಪ್ಪು ಭಾವೈಕ್ಯತಾ ಸಮಾವೇಶ ಇಂದು

ವ್ಯಕ್ತಿತ್ವಗಳನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ, ಅವರ ಬದುಕಿನ ಮೌಲ್ಯಗಳು ಹಾಗೂ...