ದ.ಕ | ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು; ಸಮಯ ಪ್ರಜ್ಞೆ ಮೆರೆದ ಬಸ್‌ ಚಾಲಕ, ನಿರ್ವಾಹಕ

Date:

Advertisements

ಖಾಸಗಿ‌ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ ತೋರಿದ್ದಾರೆ.

ಮಂಗಳೂರಿನಲ್ಲಿ ರೂಟ್ ನಂ.13 ಎಫ್‌ನ ಕೃಷ್ಣ ಪ್ರಸಾದ್ ಬಸ್ ಕೂಳೂರು ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತದ ಮುನ್ಸೂಚನೆ ದೊರಕಿತ್ತು. ಈ ವೇಳೆ ವಿಷಯದ ಗಂಭೀರತೆ ಅರಿತ ಬಸ್ ಚಾಲಕ ಹಾಗೂ ನಿರ್ವಾಹಕರಾದ ಗಜೇಂದ್ರ ಕುಂದರ್, ಮಹೇಶ್ ಪೂಜಾರಿ ಹಾಗೂ ಸುರೇಶ್ ಅವರು ಇತರ ಪ್ರಯಾಣಿಕರೊಂದಿಗೆ ಬಸ್ಸನ್ನು ಆ್ಯಂಬುಲೆನ್ಸ್ ಮಾದರಿಯಲ್ಲಿ ಸೈರನ್ ಹಾಕಿಕೊಂಡು 6 ಕಿಮೀ ದೂರವನ್ನು 6 ನಿಮಿಷದಲ್ಲಿ ಕ್ರಮಿಸಿ ವಿದ್ಯಾರ್ಥಿನಿಯನ್ನು ನಗರದ ಕಂಕನಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿರವಾರ ತಹಶೀಲ್ದಾರ್ ಕಚೇರಿಗೆ ತಾಡಪತ್ರಿ ಮೇಲ್ಛಾವಣಿ

ವಿದ್ಯಾರ್ಥಿನಿಯನ್ನು ಕೂಡಲೇ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ರೀತಿ ವಿದ್ಯಾರ್ಥಿನಿಯನ್ನು ಅಪಾಯದಿಂದ ಪಾರು ಮಾಡಿರುವ ಬಸ್ ಚಾಲಕ, ನಿರ್ವಾಹಕರ ಮಾನವೀಯ ಹಾಗೂ ಸಮಯ ಪ್ರಜ್ಞೆಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಚಾಲಕ ಹಾಗೂ ನಿರ್ವಾಹಕರ ಕಾಳಜಿ ಬಗ್ಗೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಅಭಿನಂದಿಸಿದ್ದಾರೆ.

Advertisements
Bose Military School
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ...

ಉಡುಪಿ | ಜಗತ್ತಿನಾದ್ಯಂತ ಪ್ರತೀ ವರ್ಷ ನೂರಾರು ಮುದ್ರಣ ಪತ್ರಿಕೆಗಳು ಮುಚ್ಚಿಕೊಳ್ಳುತ್ತಿವೆ – ರಾಜಾರಾಂ ತಲ್ಲೂರು

ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ...

ಹಾವೇರಿ | ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ....

Download Eedina App Android / iOS

X