ದಕ್ಷಿಣ ಕನ್ನಡ | ಕರಾವಳಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಸಲೀಂ ಅಹಮ್ಮದ್

Date:

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ಬೂತ್‌ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಶಕ್ತಿ ಉಭಯ ಜಿಲ್ಲೆಯಲ್ಲಿ ಭದ್ರವಾಗಿದೆ ಎನ್ನುವ ಸಂದೇಶವನ್ನು ರಾಜ್ಯಕ್ಕೆ ರವಾನಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಕರೆ ನೀಡಿದರು.

- Advertisement -

ಜಿಲ್ಲೆಯ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಗ್ರೌಂಡ್‌ನಲ್ಲಿ ಫೆಬ್ರವರಿ 17ರಂದು ಆಯೋಜಿಸಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಕುರಿತು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ಕಾಂಗ್ರೆಸ್ ಚುನಾವಣಾ ಪ್ರಚಾರ ಚುರುಕುಗೊಂಡಿದ್ದು, ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ಈ ಎರಡು ಉಭಯ ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸಚಿವ ಕೆ ಎನ್ ರಾಜಣ್ಣ ವಿಶ್ವಾಸ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ಬಿ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕರುಗಳಾದ ಶಕುಂತಲಾ ಶೆಟ್ಟಿ, ಜೆ ಆರ್ ಲೋಬೊ, ಐವನ್ ಡಿಸೋಜ, ಕೆಪಿಸಿಸಿ ಉಪಾಧ್ಯಕ್ಷ ಪಿ ವಿ ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಪದ್ಮರಾಜ್ ಆರ್, ಮಮತಾ ಗಟ್ಟಿ, ಕೃಪಾ ಆಳ್ವಾ, ಶಶಿಧರ್ ಹೆಗ್ಡೆ, ಭರತ್ ಮುಂಡೋಡಿ ಸೇರಿದಂತೆ ಇತರರು ಇದ್ದರು. ‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...