ದಕ್ಷಿಣ ಕನ್ನಡ | ಸಿಎಎ ಮೂಲಕ ಜನರ ದಿಕ್ಕು ತಪ್ಪಿಸುವ ಹುನ್ನಾರ: ಬಿ ಕೆ ಇಮ್ತಿಯಾಜ್

Date:

ದೇಶದ ಜನ ಸಂದಿಗ್ಧ ಪರಿಸ್ಥಿತಿಯಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರ ಬದುಕು ಬವಣೆಯ ಬಗ್ಗೆ ಚರ್ಚೆಯಾಗಬೇಕಾಗದಲ್ಲಿ ಜನರ ದಿಕ್ಕು ತಪ್ಪಿಸುವ ಅಜೆಂಡಾದ ಸಲುವಾಗಿ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಜಾರಿಗೆ ತರಲಾಗಿದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ
ಬಿ ಕೆ ಇಮ್ತಿಯಾಜ್ ಆರೋಪಿಸಿದರು.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಡಿವೈಎಫ್ಐನಿಂದ ಆಯೋಜಿಸಿದ್ದ ʼಪೌರತ್ವ ತಿದ್ದುಪಡಿ ಕಾಯಿದೆʼ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಂಸತ್ ಚುನಾವಣೆಯ ಹೊಸ್ತಿಲಲ್ಲಿರುವ ಸಂದರ್ಭದಲ್ಲೇ ಭಾರತದ ಬಹುತ್ವಕ್ಕೆ ಅಪಾಯ ಒಡ್ಡುವ, ಆರ್‌ಎಸ್‌ಎಸ್‌ನ ಅಜೆಂಡಾ ಜಾರಿಗೊಳಿಸುವ ಮೋದಿ ಸರ್ಕಾರದ ಸಂವಿಧಾನ ವಿರೋಧಿ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಜಾರಿಗೊಳಿಸಿರುವ ತೀರ್ಮಾನವು ಜನರನ್ನು ದಿಕ್ಕು ತಪ್ಪಿಸುವ ಹುನ್ನಾರ ಇದರ ಹಿಂದೆ ಅಡಗಿದೆ” ಎಂದು ಹೇಳಿದರು.

ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾ‌ಡಿ, “ಧರ್ಮ ನಿರಪೇಕ್ಷತೆಯ ನಾಡಿನಲ್ಲಿ ಪೌರತ್ವ ಪಡೆಯಲು ಮತಧರ್ಮ ಮಾನದಂಡವಾಗಿಸಿರುವುದು ಸಂವಿಧಾನ ವಿರೋಧಿ ನಡೆ. ಈ ಹಿಂದೆ ಸಿಎಎ ಜಾರಿಗೊಳಿಸುವ ಸಂದರ್ಭದಲ್ಲಿ ದೇಶದಲ್ಲಿ ನಡೆದ ಹಿಂಸಾಚಾರಕ್ಕೆ ನೂರಾರು ಅಮಾಯಕರು ಪ್ರಾಣವನ್ನು ತೆತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಗೋಲಿಬಾರ್‌ಗೆ ಇಬ್ಬರು ಅಮಾಯಕ ಮುಸಲ್ಮಾನರನ್ನು ಬಲಿ ಪಡೆದಿದ್ದನ್ನು ಈ ಜಿಲ್ಲೆಯ ಜನ ಇನ್ನೂ ಮರೆತಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ನಡೆಸಿರುವ ಕುತಂತ್ರ ಇದು. ಮುಂಬರುವ ಚುನಾವಣೆಯಲ್ಲಿ ಯುವಜನರ ಉದ್ಯೋಗ, ಶಿಕ್ಷಣ, ಆರೋಗ್ಯ ಮತ್ತು ಬದುಕುವ ಪ್ರಶ್ನೆಯ ಕುರಿತು, ಹಸಿವಿನ ಸೂಚ್ಯಂಕದಲ್ಲಿ ಹಿಂದೆ ಸರಿದ ವಿಚಾರಗಳ ಕುರಿತು ಚರ್ಚೆಯಾಗಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಶಿಕ್ಷಣದಿಂದ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಬಿ ನಂಜುಂಡಪ್ಪ

ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರುಗಳಾದ ನವೀನ್ ಕೊಂಚಾಡಿ, ಅಡ್ವಕೇಟ್ ನಿತಿನ್ ಕುತ್ತಾರ್, ತಯ್ಯೂಬ್ ಬೆಂಗರೆ, ಜಗದೀಶ್ ಬಜಾಲ್, ರಿಜ್ವಾನ್ ಹರೇಕಳ, ಅಶ್ರಫ್ ಹರೇಕಳ, ಯೋಗೀಶ್ ಜಪ್ಪಿನಮೊಗರು,‌ ಅಸುಂತಾ ಡಿಸೋಜ, ಹನೀಫ್ ಬೆಂಗರೆ, ನೌಶದ್ ಬೆಂಗರೆ,‌ ಮನೋಜ್ ಉರ್ವಸ್ಟೋರ್, ಶ್ರೀನಾಥ್ ಕಾಟಿಪಳ್ಳ, ಸೈಫರ್ ಆಲಿ, ಯೋಗಿತಾ‌ ಉಳ್ಳಾಲ,‌ ಭಾರತಿ ಬೋಳಾರ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...