ದಕ್ಷಿಣ ಕನ್ನಡ | ಗುತ್ಯಡ್ಕ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಡಿಸಿ

Date:

Advertisements

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುತ್ಯಡ್ಕ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ, ಗ್ರಾಮಸ್ಥರ ಅಹವಾಲು ಆಲಿಸಿದರು.

“ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಹಾಗೂ ಪ್ರಸಿದ್ಧ ಚಾರಣ ತಾಣವಾದ ನೇತ್ರಾವತಿ ಬಿಂದುವಿನ ನಡುವೆ ಸಂಪರ್ಕ ಕಲ್ಪಿಸುವ ಎಳನೀರು–ಗುತ್ಯಡ್ಕ–ಕುರ್ಚಾರು ರಸ್ತೆಯು ಸುಮಾರು 11 ಕಿಮೀಗಳಷ್ಟಿದೆ. ಈ ಗ್ರಾಮಗಳ ಸುಮಾರು  80 ಕುಟುಂಬಗಳು ಸಂಪರ್ಕಕ್ಕೆ ಈ ರಸ್ತೆಯನ್ನೇ ಅವಲಂಬಿಸಿವೆ” ಎಂದು ಗುತ್ಯಡ್ಕ ಗ್ರಾಮಸ್ಥರು ಹೇಳಿದರು.

ಹದಗೆಟ್ಟಿರುವ ರಸ್ತೆ ದುರಸ್ತಿಗೆ ಆಗ್ರಹಿಸಿದ ಗ್ರಾಮಸ್ಥರು, “ಸರ್ಕಾರವು ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯ ಧೋರಣೆ ಅನುಸರಿಸುತ್ತಿದೆ” ಎಂದು ಆರೋಪಿಸಿ ಗುತ್ಯಡ್ಕ ಗ್ರಾಮಸ್ಥರು ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದರು.

Advertisements

“ಮುಲ್ಲೈ ಮುಗಿಲನ್‌ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಲೆಯಲ್ಲಿರುವ ಗುತ್ಯಡ್ಕಕ್ಕೆ ಭೇಟಿ ನೀಡಿದ ಮೊದಲ ಜಿಲ್ಲಾಧಿಕಾರಿ. ಎಳನೀರು– ಗುತ್ಯಡ್ಕ–ಕುರ್ಚಾರು ರಸ್ತೆಯ ಕಾಂಕ್ರೀಟ್‌ನ ಅಡಿಯ ಮಣ್ಣು ಕೊಚ್ಚಿಹೋಗಿದೆ. ಮುಂಬರುವ ಮಳೆಗಾಲದಲ್ಲಿ ಇಲ್ಲಿ ಭೂಕುಸಿತ ಉಂಟಾಗುವ ಅಪಾಯವಿದೆ” ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗೆ ತಿಳಿಸಿದರು.

“ಈ ರಸ್ತೆಯಲ್ಲಿ ಗ್ರಾಮಸ್ಥರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸಬೇಕಾದ ಸ್ಥಿತಿ ಎದುರಾಗಿದೆ” ಎಂದು ಸ್ಥಳೀಯರು ಜಿಲ್ಲಾಧಿಕಾರಿ ಬಳಿ ಅಳಲು ತೋಡಿಕೊಂಡರು.

ರಸ್ತೆಯ ತಳಭಾಗದ ಮಣ್ಣು ಕೊಚ್ಚಿ ಹೋದ ಪ್ರದೇಶಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿ, “ದಯವಿಟ್ಟು ಮತದಾನ ಬಹಿಷ್ಕರಿಸಬೇಡಿ. ಅಧಿಕಾರಿಗಳು ಪರಿಶೀಲನೆ ನಡೆಸಿ ಗ್ರಾಮಸ್ಥರ ಬೇಡಿಕೆ ಈಡೇರಿಸಲು ಅಗತ್ಯ ಕ್ರಮವಹಿಸಲಿದ್ದಾರೆ” ಎಂದು ಜಿಲ್ಲಾಧಿಕಾರಿ ತಿಳಿಸಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಪೇರಿ ಕಿತ್ತ ಬಿಜೆಪಿ ರಾಜ್ಯ ಸಂಯೋಜಕ

ಇದಕ್ಕೂ ಮುನ್ನ ಜಿಲ್ಲಾಧಿಕಾರಿಯವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್‌, ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ, ಬೆಳ್ತಂಗಡಿಯ ತಹಸೀಲ್ದಾರ್‌ ಪೃಥ್ವಿ ಸಾನಿಕಂ ಸೇರಿದಂತೆ ಇತರ ಅಧಿಕಾರಿಗಳ ಜೊತೆ ನಾರಾವಿ ತಪಾಸಣಾ ಠಾಣೆ, ಕಜಕೆ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣಾ ತಯಾರಿಗಳ ಪರಿಶೀಲನೆ ನಡೆಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X