ದಕ್ಷಿಣ ಕನ್ನಡ | ಅಕ್ರಮಗಳನ್ನೇ ನೀತಿಯನ್ನಾಗಿಸಿದ ಬಿಜೆಪಿಯನ್ನು ಸೋಲಿಸಿ: ಬಾಲಕೃಷ್ಣ ಶೆಟ್ಟಿ

Date:

ಮೋದಿ ನೇತೃತ್ವದ ಬಿಜೆಪಿ ಸರಕಾರ ಜನ ಸಾಮಾನ್ಯರ ಆಶೋತ್ತರಗಳನ್ನೆಲ್ಲಾ ಕಡೆಗಣಿಸಿ ಚುನಾವಣಾ ಬಾಂಡ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ಅಕ್ರಮ ದಾರಿಗಳ ಮೂಲಕ ವಿರೋಧ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚನ್ನು ರೂಪಿಸಿ, ದೇಶದಲ್ಲಿ ಅಕ್ರಮಗಳನ್ನೇ ನೀತಿಯನ್ನಾಗಿಸಿರುವ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸಬೇಕೆಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ ಕರೆ ನೀಡಿದರು.

ಅವರು ಭಾನುವಾರ ಮಂಗಳೂರಿನ ನಾಸಿಕ್ ಬಂಗೇರ ಸಭಾಭವನದಲ್ಲಿ ನಡೆದ ಪ್ರಜಾಪ್ರಭುತ್ವ ಜಾತ್ಯಾತೀತತೆಯ ಉಳಿವಿಗಾಗಿ ಮತ್ತು ದ.ಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ನಡೆದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರ ಮಟ್ಟದ ರಾಜಕೀಯ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಬಂಡವಾಳಶಾಹಿಗಳ ಜೊತೆ ಅಪವಿತ್ರ ಮೈತ್ರಿಯ ಮೂಲಕ ದೇಶದ ಸಾರ್ವಜನಿಕ ಸಂಪತ್ತುಗಳನ್ನು ಕಾರ್ಪೊರೇಟ್ ‌ಕಂಪನಿಗಳಿಗೆ ಮಾರಿದ್ದಲ್ಲದೆ, ಇದ್ದ ಕಾರ್ಮಿಕ ಪರ ನೀತಿಗಳನ್ನು ರದ್ದುಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಗಳನ್ನು ಜಾರಿಗೊಳಿಸಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವರ್ಷಕ್ಕೆರಡು ಕೋಟಿ ಉದ್ಯೋಗಗಳ ಸೃಷ್ಟಿಸುವ ಭರವಸೆಯನ್ನು ಈವರೆಗೂ ಈಡೇರಿಸಲು ಸಾಧ್ಯವಾಗಿಲ್ಲ. ಉದ್ಯೋಗಳನ್ನು ಕಳಕೊಂಡು ಬೀದಿಗೆ ಬರುವಂತಹ ಆರ್ಥಿಕ ನೀತಿಗಳನ್ನು ಜಾರಿಗೊಳಿಸಿರುವುದೇ ಬಿಜೆಪಿ ಆಡಳಿತದ ಸಾಧನೆ. ದೇಶ ದಿವಾಳಿಗೊಂಡು ಜನ ಬದುಕಲು ಸಂಕಷ್ಟಪಡುತ್ತಿರುವ ಈ ಕಾಲದಲ್ಲಿ ಬಿಜೆಪಿಗೆ ಈ ಚುನಾವಣೆಯಲ್ಲೂ ಸೋಲಾಗದಿದ್ದಲ್ಲಿ, ಈ ದೇಶದ ಜನಸಾಮಾನ್ಯರ ಬದುಕು ಸೋಲಲಿದೆ, ಜನರ ಬದುಕು ಅವರ ಆಶೋತ್ತರಗಳು ಗೆಲ್ಲಬೇಕಾದರೆ ಬಿಜೆಪಿ ಸೋಲಲೇ ಬೇಕಾಗಿದೆ ಎಂದರು.

ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ. ಕೃಷ್ಣಪ್ಪ ಕೊಂಚಾಡಿ ಮಾತನಾಡುತ್ತಾ, ದೇಶದಲ್ಲಿ ದ್ವೇಷವನ್ನೇ ಬಿತ್ತುವ ಮೂಲಕ ಮತೀಯ ರಾಜಕಾರಣ ಮಾಡಿದ್ದಲ್ಲದೆ, ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿರೋಧಿಯಾಗಿ ವರ್ತಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ದೀರ್ಘಾವಧಿಯಿಂದ ಗೆಲ್ಲುತ್ತಾ ಬರುತ್ತಿರುವ ಬಿಜೆಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಯಾವೊಂದು ಕೊಡುಗೆ ನೀಡಲೂ ಸಾಧ್ಯವಾಗಿಲ್ಲ ಎಂದರು.

ಜಿಲ್ಲೆಯ ಅಭಿವೃದ್ಧಿಯ ಕಡೆಗಣನೆಗೆ ಹಿಂದಿನ ಸಂಸದ ನಳಿನ್ ಕುಮಾರ್ ಕಟೀಲೊಬ್ಬರೇ ಹೊಣೆಯಲ್ಲ ಅದಕ್ಕೆಲ್ಲಾ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಪೂರ್ಣ ಹೊಣೆಹೊರಬೇಕು. ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ಯುವಜನರನ್ನು ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿನಿಂದ ವಂಚಿಸಿದ್ದಲ್ಲದೆ ಮತೀಯ ರಾಜಕಾರಣದ ಕಾಲಾಳುಗಳಾಗಿ ಬಳಸಿ ಬಲಿಪಡೆದಿರುವುದು ಈ ಜಿಲ್ಲೆಯ ಬಿಜೆಪಿ ಪಕ್ಷ ಮತ್ತು ಆರ್‌ಎಸ್‌ಎಸ್ ಎಂದು ಹೇಳಿದರು.

ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ರಾಜಕೀಯ ಸಮಾವೇಶದ ಅಧ್ಯಕ್ಷತೆಯನ್ನು ಭಾರತಿ ಬೋಳಾರ ವಹಿಸಿದ್ದರು. ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ರಾಜಕೀಯ ಸಮಾವೇಶದ ನೇತೃತ್ವ ವಹಿಸಿ ನಿರೂಪಿಸಿದರು ಹಾಗೂ ಪ್ರದೀಪ್ ಕುಲಾಲ್ ವಂದಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...