ದಕ್ಷಿಣ ಕನ್ನಡ | ಮಾದಕ ವಸ್ತು ಮಾರಾಟಗಾರನ ಬಂಧನ

Date:

ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ(ಮೆಥಿಲೀನ್ ಡೈಆಕ್ಸಿ ಮೆಥಾಂಫೆಟಮೈನ್)ಯನ್ನು ಮಾರಾಟ ಮಾಡುತ್ತಿದ್ದವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

- Advertisement -

ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬ ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.  ಎಂಡಿಎಂಎ ಎಂಬ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಉಳ್ಳಾಲ ತಾಲೂಕಿನ ಅಬ್ದುಲ್ ಅಜೀಜ್ ಯಾನೆ ಪೋಕರ್ ಅಜೀಜ್(42) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆರೋಪಿಯಿಂದ ಒಟ್ಟು 26 ಗ್ರಾಂ ತೂಕದ 1,30,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, 2 ಮೊಬೈಲ್ ಫೋನ್‌ಗಳು ಸೇರಿದಂತೆ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೊತ್ತ ₹6.41 ಲಕ್ಷ ಆಗಬಹುದೆಂದು ಅಂದಾಜಿಸಿದ್ದಾರೆ. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಈ ಸುದ್ದಿ ಓದಿದ್ದೀರಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ ಶ್ರೀನಿವಾಸ್ ಕೊಲೆ

ಈತನ ವಿರುದ್ಧ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿದ್ದು, ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯದಲ್ಲಿ ಅಲ್ಲಿಯ ಕಾರಾಗೃಹ ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣವೂ ದಾಖಲಾಗಿದೆ.

ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿರುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...