ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ-ಕೇರಳ ಗಡಿಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ನಡುವೆಯೇ ಮನೆಯಲ್ಲಿದ್ದವರಿಗೆ ಭೂಮಿ ಕಂಪಿಸಿದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡ್ಯೂರಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಒಂದೆರಡು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ಹೀಗಾಗಿ ಜನರು ಭಯಭೀತಗೊಂಡಿದ್ದಾರೆ.
ಇದನ್ನು ಓದಿದ್ದೀರಾ? ಅವಮಾನ ಅನುಭವಿಸಿದ್ದ ನಾಯಕ: ದಕ್ಷಿಣ ಆಫ್ರಿಕಾಕ್ಕೆ 27 ವರ್ಷದ ಬಳಿಕ ಐಸಿಸಿ ಟ್ರೋಫಿ ತಂದುಕೊಟ್ಟ
ವಿಷಯ ತಿಳಿದು ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಕನ್ಯಾನದಲ್ಲಿ ಈ ಅನುಭವ ಆಗಿದೆ. ಆತಂಕಗೊಂಡ ಇಲ್ಲಿನ ಗ್ರಾಮಸ್ಥರಿಗೆ ಅಧಿಕಾರಿಗಳು ಧೈರ್ಯ ತುಂಬಿದ್ದಾರೆ.
