ದಕ್ಷಿಣ ಕನ್ನಡ | ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ; ಆರೋಗ್ಯ ಸ್ಥಿರ

Date:

ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಜರುಗಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಘಟನೆ ನಡೆದಿದ್ದು, ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ಅವರನ್ನು ಕೂಡಲೇ ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್‌ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

“ವೈಯಕ್ತಿಕ ಕಾರಣಗಳಿಂದ ಇಂದು ಆತ್ಮಹತ್ಯೆಗೆ ಯತ್ನಿಸಿದ ಇವರನ್ನು ಕೂಡಲೇ ವೆನ್‌ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ನಿಗಾವಣೆಗಾಗಿ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ” ಎಂದು ಜಿಲ್ಲಾ ಪಂಚಾಯತ್ ಸಿಇಒ ಆನಂದ್ ತಿಳಿಸಿದ್ದಾರೆ.

ಇವರ ಪತ್ನಿ ಜಯಂತಿ ಸ್ಟಾಫ್ ನರ್ಸ್‌ ಆಗಿದ್ದು, ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗರೆ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು; ಬಿಜೆಪಿ ಪ್ರಶ್ನೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ್‌ನ ಲೆಕ್ಕಾಧೀಕ್ಷ ಬಾಲು ಡಿ ಎಂ ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ಸುಳ್ಯ | ಎಡಮಂಗಲದಲ್ಲಿ ʼಪ್ರಜಾಧ್ವನಿ ಕರ್ನಾಟಕʼ ಸಹಯೋಗದಲ್ಲಿ ಗಾಂಧಿ ಜಯಂತಿ

ಪ್ರಜಾಧ್ವನಿ ಕರ್ನಾಟಕ ಮತ್ತು ಸರಕಾರಿ ಪ್ರೌಢಶಾಲೆ ಎಡಮಂಗಲ ಇವುಗಳ ಸಹಯೋಗದಲ್ಲಿ ಭಾರತದ...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...