ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ ದಾಂಧಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾದಲ್ಲಿ ನಡೆದಿದೆ. ಇಬ್ಬರು ಹಿಂದುತ್ವವಾದಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮದ ಜುಮಾ ಮಸೀದಿ ಆವರಣಕ್ಕೆ ಕೋಮುವಾದಿ ಕಾರ್ಯಕರ್ತರು ಸೆ.24ರ ರಾತ್ರಿ ನುಗ್ಗಿದ್ದಾರೆ. ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಾರೆ. ಮಸೀದಿಯ ಮೌಲ್ವಿ ಹೊರ ಬರುತ್ತಿದ್ದಂತೆ ಇಬ್ಬರೂ ಪರಾರಿಯಾಗಿದ್ದಾರೆ. ಅವರು ಬೈಕ್‌ನಲ್ಲಿ ಹೋಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಸೀದಿಯ ಮೌಲ್ವಿ ದೂರು ದಾಖಲಿಸಿದ್ದು, “ಮಸೀದಿ ಆವರಣಕ್ಕೆ ನುಗ್ಗಿದ ಇಬ್ಬರು ಅಪರಿಚಿತರು ಜೈ ಶ್ರೀ ರಾಮ್ ಘೋಷಣೆ ಕೂಗಿದರು. ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲವೆಂದು ಬೊಬ್ಬೆ ಹಾಕಿದರು” ಎಂದು ಉಲ್ಲೇಖಿಸಿದ್ದಾರೆ.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಕಡಬ ಪೊಲೀಸರು ಕ್ಯಾಮೆರಾದಲ್ಲಿ ದೃಶ್ಯಗಳನ್ನು ಆಧರಿಸಿ ಆರೋಪಿ ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ ಮತ್ತು ಕೈಕಂಬ ನಡ್ತೋಟ ನಿವಾಸ್ ಸಚಿನ್ ಎಂಬಾತನನ್ನು ಬಂಧಿಸಿದ್ದಾರೆ.