ದಕ್ಷಿಣ ಕನ್ನಡ | ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರ ಬಂಧನ

Date:

ನಾಲ್ಕು ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಕಳ್ಳಸಾಗಣೆದಾರರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದ ಮಹಿಳೆಯಿಂದ ಹಸುಗಳನ್ನು ಖರೀದಿಸಿ ಮಿನಿ ಗೂಡ್ಸ್ ವಾಹನದಲ್ಲಿ ಜಿಲ್ಲೆಯ ಉಳ್ಳಾಲ ತಾಲೂಕಿನ ಅಲೇಕಳಕ್ಕೆ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ಸ್ಥಳದಲ್ಲಿ, ವಾಹನವು ಕೆಟ್ಟು ನಿಂತಿತ್ತು. ವಾಹನವನ್ನು ಚಲಾಯಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರಲ್ಲಿ ಮೂವರು ವಾಹನವನ್ನು ತಳ್ಳಲು ಪ್ರಾರಂಭಿಸಿದರು. ಅವರಿಗೆ ಸಹಾಯ ಮಾಡಲು, ಗ್ರಾಮಸ್ಥರು ಸಹ ಅಲ್ಲಿಗೆ ಬಂದು ವಾಹನವನ್ನು ತಳ್ಳಲು ಪ್ರಾರಂಭಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಾಹನದೊಳಗೆ ಟಾರ್ಪಾಲಿನ್‌ನಿಂದ ಮುಚ್ಚಿದ ಹಸುಗಳನ್ನು ಗ್ರಾಮಸ್ಥರು ಗಮನಿಸಿದರು. ಅನುಮಾನಗೊಂಡ ಅವರು ನಾಲ್ವರನ್ನು ಪ್ರಶ್ನಿಸಿದಾಗ, ಅವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | 20 ವರ್ಷಗಳಿಂದ‌ ವಿದ್ಯುತ್ ಶುಲ್ಕ ಪಾವತಿಸದ ಶಿರೋಳ ಗ್ರಾಮಸ್ಥರು!

ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಕರ್ನಾಟಕ ಜಾನುವಾರು ಹತ್ಯೆ ತಡೆ ಮತ್ತು ಸಂರಕ್ಷಣೆ ಕಾಯ್ದೆ-2020ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಂತರ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು.

ಪೊಲೀಸರು ಅವರ ಹೆಸರುಗಳನ್ನು ಅಹ್ಮದ್ ಇರ್ಸಾದ್, ಖಾಲಿದ್ ಬಿ ಎಂ, ಜಾಫರ್ ಸಾದಿಕ್ ಮತ್ತು ಫಯಾಜ್ ಎಂದು ಗುರುತಿಸಿದ್ದಾರೆ. ಖಾಲಿದ್ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯ ಬಂಗ್ರ ಮಂಜೇಶ್ವರದವರಾಗಿದ್ದರೆ, ಉಳಿದವರು ಉಳ್ಳಾಲದವರು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ...

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು...

ಚಾಮರಾಜನಗರ | ಆಶ್ರಯ ಮನೆ ಕೊಡಿಸುತ್ತೇನೆಂದು ಗ್ರಾ.ಪಂ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ

ಗ್ರಾಮ ಪಂಚಾಯತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಪಂಚಾಯತಿ...