ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ದುರುಳ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಬಂಧಿತ ಆರೋಪಿ. ಉಪ್ಪಳದಿಂದ ಪುತ್ತೂರಿಗೆ ಬರುತ್ತಿದ್ದ ಬಸ್‌ನಲ್ಲಿ ಶಹನಾಝ್ ಎಂಬವರು ಪ್ರಯಾಣಿಸುತ್ತಿದ್ದರು. ಅವರೊಂದಿಗೆ ಆರೋಪಿ ಸುಬ್ರಹ್ಮಣ್ಯ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದು, “ನಾನು ನನ್ನ ತಾಯಿಯೊಂದಿಗೆ ಬಸ್‌ನಲ್ಲಿ ತೆರಳುತ್ತಿದ್ದೆ. ಹಿಂದಿನ ಸೀಟ್‌ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಸೀಟ್‌ನ ಮಧ್ಯ ಭಾಗದಲ್ಲಿ ಕೈ ಹಾಕಿ, ಸೊಂಟ ಹಿಡಿದು, ಅಸಭ್ಯವಾಗಿ ವರ್ತಿಸಿದ್ದಾನೆ. ಆತನನ್ನು ಪ್ರಶ್ನಿಸಿದ ಬಳಿಕ ಬಸ್‌ನಿಂದ ಇಳಿದು ಪರಾರಿಯಾಗಿದ್ದಾನೆ” ಎಂದು ವಿವರಿಸಿದ್ದಾರೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಯು ಜಾಮೀನು ಪಡೆದು ಬಿಡುಗಡೆಯಾಗಿದ್ದಾನೆ.