ದಕ್ಷಿಣ ಕನ್ನಡ | ಬಸ್‌ನಲ್ಲಿ ಮಹಿಳೆಗೆ ಕಿರುಕುಳ; ಸಹ ಪ್ರಯಾಣಿಕನ ಬಂಧನ

Date:

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ದುರುಳ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್‌ ಬಂಧಿತ ಆರೋಪಿ. ಉಪ್ಪಳದಿಂದ ಪುತ್ತೂರಿಗೆ ಬರುತ್ತಿದ್ದ ಬಸ್‌ನಲ್ಲಿ ಶಹನಾಝ್‌ ಎಂಬವರು ಪ್ರಯಾಣಿಸುತ್ತಿದ್ದರು. ಅವರೊಂದಿಗೆ ಆರೋಪಿ ಸುಬ್ರಹ್ಮಣ್ಯ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದು, “ನಾನು ನನ್ನ ತಾಯಿಯೊಂದಿಗೆ ಬಸ್‌ನಲ್ಲಿ ತೆರಳುತ್ತಿದ್ದೆ. ಹಿಂದಿನ ಸೀಟ್‌ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಸೀಟ್‌ನ ಮಧ್ಯ ಭಾಗದಲ್ಲಿ ಕೈ ಹಾಕಿ, ಸೊಂಟ ಹಿಡಿದು, ಅಸಭ್ಯವಾಗಿ ವರ್ತಿಸಿದ್ದಾನೆ. ಆತನನ್ನು ಪ್ರಶ್ನಿಸಿದ ಬಳಿಕ ಬಸ್‌ನಿಂದ ಇಳಿದು ಪರಾರಿಯಾಗಿದ್ದಾನೆ” ಎಂದು ವಿವರಿಸಿದ್ದಾರೆ.

ಆರೋಪಿಯನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಯು ಜಾಮೀನು ಪಡೆದು ಬಿಡುಗಡೆಯಾಗಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...