ದಕ್ಷಿಣ ಕನ್ನಡ | ಮುಸ್ಲಿಮರ ವಿರುದ್ಧ ದ್ವೇಷ ಭಾಷಣ; ಬಿಜೆಪಿ ಅಭ್ಯರ್ಥಿ ಮತ್ತು ಮೇಯರ್ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು, ಮೊಗವೀರರನ್ನು ಮುಸ್ಲಿಮರ ವಿರುದ್ದ ಎತ್ತಿಕಟ್ಟುವ, ಆ ಮೂಲಕ ಮತೀಯ ದ್ವೇಷವನ್ನು ಹುಟ್ಟು ಹಾಕಿ ಚುನಾವಣೆಯಲ್ಲಿ ರಾಜಕೀಯ ಲಾಭ ಗಿಟ್ಟಿಸುವ ಯತ್ನ ನಡೆಸಿರುತ್ತಾರೆ ಎಂದು ಸಿಪಿ‌ಐಎಂ ಹೇಳಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಸಿಪಿಎಂ ಕಾರ್ಯಕರ್ತರು, ಬಿಜೆಪಿ ನಾಯಕರ ರಾಜಕೀಯ ದುರುದ್ದೇಶ ಪರಸ್ಪರ ಎತ್ತಿಕಟ್ಟುವ ಮಾತುಗಳನ್ನು ಖಂಡಿಸಿದ್ದು, “ಮೇಯರ್ ಸುಧೀರ್ ಶೆಟ್ಟಿ ಹಾಗೂ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ವಿರುದ್ದ ಚುನಾವಣಾ ಆಯೋಗ ಕ್ರಿಮಿನಲ್ ಮೊಕದ್ದಮೆ ಹೂಡಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ ತಿಳಿಸಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸತತ ಗೆಲುವು ಸಾಧಿಸಿರುವುದು ಹಿಂದು ಮುಸ್ಲಿಮರನ್ನು ಪರಸ್ಪರ ಎತ್ತಿಕಟ್ಟಿ. ಈ ಚುನಾವಣೆಯಲ್ಲಿ ಹೇಳಿಕೊಳ್ಳಲು ಯಾವುದೇ ಸಾಧನೆ ಇಲ್ಲದೆ ಬಿಜೆಪಿ ಹಾಗೂ ಅದರ ಅಭ್ಯರ್ಥಿ ಬೃಜೇಶ್ ಚೌಟ ಅದೇ ಮತೀಯ ದ್ವೇಷದ ಅಜೆಂಡಾವನ್ನು ಮುನ್ನಲೆಗೆ ತರಲು ಯತ್ನಿಸುತ್ತಿದ್ದಾರೆ. ಅದರ ಭಾಗವಾಗಿ ಮೀನುಗಾರಿಕೆ ಉದ್ಯಮದಲ್ಲಿ ಪರಸ್ಪರ ಅನ್ಯೋನ್ಯತೆಯಲ್ಲಿ ತೊಡಗಿಸಿಕೊಂಡಿರುವ ಮೊಗವೀರರು ಹಾಗೂ ಮುಸ್ಲಿಮರ ಮಧ್ಯೆ ಒಡಕು ಮೂಡಿಸಲು ಕೊಳಕು ಮಾತುಗಳನ್ನು ಆಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮುಸ್ಲಿಮರಿಗೆ ಮೀನು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರದೆಂದು ಓರ್ವ ಜವಾಬ್ದಾರಿಯುತ ಮೇಯರ್ ಲೋಕಸಭಾ ಚುನಾವಣಾ ಅಭ್ಯರ್ಥಿಯ ಮುಂದೆ ಮೊಗವೀರರಿಗೆ ದ್ವೇಷ ಭಾಷಣದ ಮೂಲಕ ಕರೆನೀಡುತ್ತಾರೆ. ಇದು ಚುನಾವಣಾ ಪೂರ್ವದಲ್ಲಿ ದ್ವೇಷದ ವಾತಾವರಣ, ಹಿಂಸಾಚಾರ ಉಂಟು ಮಾಡುವ ಯತ್ನ. ಆ ಮೂಲಕ ಯಾವುದೇ ಸಾಧನೆ ಇಲ್ಲದ ಬಿಜೆಪಿ ಅಭ್ಯರ್ಥಿಯನ್ನು ಅದೇ ಹಳೆಯ ಕೋಮುವಾದದ ಮಾದರಿಯಲ್ಲಿ ಗೆಲ್ಲಿಸಲು ಯತ್ನಿಸುಲಾಗುತ್ತಿದೆ. ಸೋಲಿನ ಭೀತಿಯಿಂದ ಬಿಜೆಪಿ ಇಂತಹ ಅತ್ಯಂತ ಅಪಾಯಕಾರಿ ರಾಜಕಾರಣವನ್ನು ಮಾಡುತ್ತಿದೆ. ಕಳೆದ ಹಲವು ಚುನಾವಣೆಗಳನ್ನು ಇದೇ ಮಾದರಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ” ಎಂದು ಯಾದವ ಶೆಟ್ಟಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕೋಮುವಾದಿ ಬಿಜೆಪಿ ಜೊತೆ ಸೇರಿದ ‘ಎಚ್‌ಡಿಕೆ’ಗಿಲ್ಲ ಬೆಂಬಲ; ಕಾಂಗ್ರೆಸ್‌ಗೆ ಜೈ ಎಂದ ದಲಿತ ಸಂಘಟನೆಗಳು

“ಚುನಾವಣೆಯ ಸಂದರ್ಭ ಸದ್ಯ ತಿಳಿಯಾದ ವಾತಾವರಣ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಕಲಹಕ್ಕೆ ಪ್ರಚೋದಿಸುವ ಬಿಜೆಪಿ ಮೇಯರ್ ಸುಧೀರ್ ಶೆಟ್ಟಿಯ ಈ ದ್ವೇಷ ಭಾಷಣವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಮೇಯರ್ ಸುಧೀರ್ ಶೆಟ್ಟಿ ಹಾಗೂ ಬಿಜೆಪಿ ಲೋಕಸಭಾ ಅಭ್ಯರ್ಥಿ ಬೃಜೇಶ್ ಚೌಟರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...

ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ...

ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ...