ದಕ್ಷಿಣ ಕನ್ನಡ | ಎರಡು ದಿನ ಬಿರುಸಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Date:

ಕರ್ನಾಟಕ ಕರಾವಳಿಯ ಹಲವೆಡೆ ಶುಕ್ರವಾರ (ಆಗಸ್ಟ್ 18) ಸಂಜೆಯ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಮತ್ತೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಶುಕ್ರವಾರ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಳೆಯ ಮುನ್ಸೂಚನೆಯನ್ನೂ ನೀಡಿತ್ತು.

- Advertisement -

ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯಲ್ಲಿ ಅಲ್ಲಲ್ಲಿ ಶನಿವಾರ ಮತ್ತು ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಮುದ್ರದಲ್ಲೂ ಅಲೆಗಳು ಏಳುವ ಸಾಧ್ಯತೆ ಇದ್ದು, ಸೆಕೆಂಡಿಗೆ 0.4 ಮೀಟರ್‌ನಿಂದ 1 ಮೀಟರ್ ವರೆಗೆ ಅಲೆಗಳು ಅಬ್ಬರಿಸಲಿವೆ. ಸಾಮಾನ್ಯವಾಗಿ ಸೆಕೆಂಡಿಗೆ 05-43 ಸೆಂ ಮೀ ಎತ್ತರದೊಂದಿಗೆ ಅಲೆಗಳು ಬರುತ್ತವೆ. ಅಲ್ಲದೆ, ಗುಡುಗು, ಮಿಂಚಿನೊಂದಿಗೆ ಸುಮಾರು 30ರಿಂದ 40 ಕಿ ಮೀ ವೇಗದಲ್ಲಿ (ಗಂಟೆಗೆ) ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಸಿಎಜಿ ವರದಿಯ ಬಗ್ಗೆ ತನಿಖೆ ನಡೆಸುವ ತಾಕತ್ತು ಮೋದಿಗೆ ಇದೆಯಾ?: ಸಿದ್ದರಾಮಯ್ಯ ಸವಾಲು

ಈಗಾಗಲೇ ಎರಡು ವಾರಗಳಿಂದ ಮಳೆ ಕಡಿಮೆಯಾಗಿ ಬಿಸಿಲಿನ ತಾಪಕ್ಕೆ ಜನರು ಕಂಗೆಟ್ಟಿದ್ದರು. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಧಾರಾ ಉಡುಪಿ ಜಿಲ್ಲೆಯ ಸ್ವರ್ಣಾ ನದಿ ಸೇರಿದಂತೆ ಕರಾವಳಿಯಲ್ಲಿ ನದಿಗಳು ತುಂಬಿ ಹರಿಯುವ ಸನ್ನಿವೇಶ ನಿರ್ಮಾಣ ಆಗಿರಲಿಲ್ಲ. ಬದಲಾಗಿ ಸ್ಥಳೀಯವಾಗಿ ಹೇಳಲಾಗುವ ಆಟಿ (ಆಷಾಢ) ತಿಂಗಳ ಕೊನೆಯ ದಿನಗಳಲ್ಲೂ ಧಾರಾಕಾರ ಮಳೆ ಸುರಿದಿರಲಿಲ್ಲ. ಭವಿಷ್ಯದ ಕುರಿತು ಸ್ಥಳೀಯ ರೈತರು ಆತಂಕಕ್ಕೀಡಾಗಿದ್ದರು. ಈ ಮಧ್ಯೆ ಶುಕ್ರವಾರ ಸಂಜೆಯ ಬಳಿಕ ಕೆಲವೆಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...